ಮಂಗಳವಾರ, ಮೇ 17, 2022
24 °C

5 ರಥಗಳಲ್ಲಿ ಇಂದಿನಿಂದ ಪ್ರಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರು ಹಮ್ಮಿಕೊಂಡಿರುವ ಜನಚೇತನ ಯಾತ್ರೆಯ ಹಿನ್ನೆಲೆಯಲ್ಲಿ ಶುಕ್ರವಾರದಿಂದ ಐದು ರಥಗಳು ನಗರದ ವಿವಿಧ ಬಡಾವಣೆಗಳಲ್ಲಿ ಸಂಚರಿಸಿ ಸಾರ್ವಜನಿಕ ಸಭೆಯ ಬಗ್ಗೆ ಪ್ರಚಾರ ನಡೆಸಲಿವೆ.ಮಲ್ಲೇಶ್ವರದಲ್ಲಿರುವ ಬಿಜೆಪಿ ಕಾರ್ಯಾಲಯ `ಜಗನ್ನಾಥ ಭವನ~ದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಅವರು ಶುಕ್ರವಾರ ಬೆಳಿಗ್ಗೆ 10ಕ್ಕೆ ರಥಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಬಿಜೆಪಿ ಮಾಧ್ಯಮ ಸಂಚಾಲಕ ಎಸ್.ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.30ರಂದು ಸಂಜೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳಲಿ ಎಂಬ ದೃಷ್ಟಿಯಿಂದ ಸಭೆಯ ಬಗ್ಗೆ ಪ್ರಚಾರ ಮಾಡುವ ಕಾರ್ಯಕ್ಕೆ ಬಿಜೆಪಿ ಮುಂದಾಗಿದೆ. ಸಿದ್ಧತೆಗಳು ಭರದಿಂದ ನಡೆದಿದ್ದು, ಯಾತ್ರೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಬೇಕಾದ ಸಿದ್ಧತೆಗಳನ್ನು ಕೈಗೊಳ್ಳಲು ಉಪ ಸಮಿತಿಗಳನ್ನು ರಚಿಸಲಾಗಿದೆ. ರಾಜಕೀಯವಾಗಿ ಪಕ್ಷದ ಸಂಘಟನೆಗೆ ಯಾತ್ರೆಯನ್ನು ಅವಕಾಶವಾಗಿ ಬಳಸಿಕೊಳ್ಳಲು ಬಿಜೆಪಿ ಮುಖಂಡರು ಕಸರತ್ತು ನಡೆಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.