ಶನಿವಾರ, ಜನವರಿ 25, 2020
16 °C

5 ರಾಜ್ಯಗಳ ಚುನಾವಣೆ ನಂತರ ಸಂಪುಟ ವಿಸ್ತರಣೆ: ಸಿ.ಎಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಉತ್ತರ ಪ್ರದೇಶ, ಪಂಜಾಬ್, ಗೋವಾ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ರಾಜ್ಯ ಸಚಿವ ಸಂಪುಟವನ್ನು ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದರು.ಗೃಹ ಕಚೇರಿ `ಕೃಷ್ಣಾ~ದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, `ಸಂಪುಟ ವಿಸ್ತರಣೆ ವಿಚಾರದಲ್ಲಿ ನಾನು ಕೈಕಟ್ಟಿ ಕುಳಿತಿಲ್ಲ. ಸಾಧ್ಯವಾದ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇನೆ. ಐದು ರಾಜ್ಯಗಳ ಚುನಾವಣಾ ಪ್ರಚಾರದಲ್ಲಿ ಪಕ್ಷದ ವರಿಷ್ಠರು ಮಗ್ನರಾಗಿರುವ ಕಾರಣ ಅವರ ಜೊತೆ ಸಂಪುಟ ವಿಸ್ತರಣೆ ಕುರಿತು ಮಾತುಕತೆ ನಡೆಸಲು ಸಾಧ್ಯವಾಗಿಲ್ಲ~ ಎಂದು ಹೇಳಿದರು.ಪಕ್ಷದಲ್ಲಿ ಮತ್ತೆ ಭಿನ್ನಮತ ಭುಗಿಲೇಳುತ್ತದೆ ಎಂಬ ಭಯದಿಂದ ಸಂಪುಟ ವಿಸ್ತರಣೆ ಮಾಡಲಾಗುತ್ತಿಲ್ಲ ಎಂಬ ಮಾತುಗಳಿಗೆ ಆಧಾರವಿಲ್ಲ. ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ನಂತರ ವರಿಷ್ಠರ ಜೊತೆ ಮಾತುಕತೆ ನಡೆಸಿ ಸಂಪುಟದಲ್ಲಿ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದರು.ಪಕ್ಷದಲ್ಲಿ ಸಣ್ಣಪುಟ್ಟ ಗೊಂದಲಗಳು ಇರುವುದು ನಿಜ. ಅವೆಲ್ಲ ನಿವಾರಿಸಿಕೊಳ್ಳಬಹುದಾದ ಗೊಂದಲಗಳು. ಪಕ್ಷದ ಹಿರಿಯರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರು ಈ ಗೊಂದಲಗಳಿಗೆ ತೆರೆ ಎಳೆಯುವ ಕೆಲಸವನ್ನು ಈಗಾಗಲೇ ಮಾಡಿದ್ದಾರೆ ಎಂದು ಉತ್ತರಿಸಿದರು.`ಮುಂದಿನ ದಿನಗಳಲ್ಲಿ ನಾನು ಆಡಳಿತದ ಕಡೆಗೆ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಅವರು ಪಕ್ಷದ ವಿದ್ಯಮಾನಗಳ ಬಗ್ಗೆ ಗಮನಹರಿಸುತ್ತೇವೆ~ ಎಂದು ಹೇಳಿದರು.

 

ಪ್ರತಿಕ್ರಿಯಿಸಿ (+)