5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ

7

5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ

Published:
Updated:

ಬೆಂಗಳೂರು: ಐದು ವರ್ಷದ ಬಾಲಕಿಯ ತುಟಿ ಕಚ್ಚಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನೀಲಸಂದ್ರದ ಆನೇಪಾಳ್ಯದ ನಿವಾಸಿ ಪ್ರಭು (25) ಎಂಬಾತನ್ನು ಅಶೋಕನಗರ ಪೊಲೀಸರು ಬಂಧಿಸಿದ್ದಾರೆ.ಗ್ಯಾಸ್ ಏಜೆನ್ಸಿಯಲ್ಲಿ ಕೆಲಸ ಮಾಡುವ ಪ್ರಭು ಗುರುವಾರ ಈ ಕೃತ್ಯ ಎಸಗಿದ್ದಾನೆ. ಮನೆಯ ಬಳಿ ಆಟವಾಡುತ್ತಿದ್ದ ಬಾಲಕಿಯನ್ನು ಮಹಡಿ ಮೇಲೆ ಕರೆದುಕೊಂಡು ಹೋಗಿ ಆತ ತುಟಿ ಕಚ್ಚಿದ್ದಾನೆ. ಮಗುವಿನ ಮೇಲೆ ಆತ ಹಲ್ಲೆಯನ್ನೂ ನಡೆಸಿದ್ದಾನೆ. ಆರೋಪಿ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಹಲ್ಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry