ಗುರುವಾರ , ಜೂನ್ 17, 2021
27 °C

50 ಕ್ರೀಡಾಪಟುಗಳಿಗೆ ನೆರವು: ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೇವನಹಳ್ಳಿ : ಭಾವನೆಗಳನ್ನು ಕಾರ್ಯರೂಪಕ್ಕೆ ತರುವ ಮೂಲಕ ಸಾಧನೆಯ ಮೆಟ್ಟಿಲು ಏರಲು ಯುವ ಜನತೆ ಶಿಸ್ತು ಮೈಗೂಡಿಸಿಕೊಳ್ಳಬೇಕು ಎಂದು ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಎ.ಸಿ ಗುರುಸ್ವಾಮಿ  ಸಲಹೆ ನೀಡಿದರು.ನಗರದ ಗುರುಭವನದಲ್ಲಿ ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವಾರ್ಷಿಕೋತ್ಸವದ ಅಂಗವಾಗಿ ನಡೆದ ಸ್ವಾಮಿ ವಿವೇಕಾನಂದ ಹಾಗೂ ನೇತಾಜಿ ಸುಭಾಷ್ ಚಂದ್ರಭೋಸ್ ಜನ್ಮದಿನಾಚಾರಣೆ ಸಮಾರಂಭದಲ್ಲಿ ಅವರು ಮಾತನಾಡಿ, ಯುವಕರ ಆರೋಗ್ಯ ಉತ್ತಮವಾಗಿರಲು ಕ್ರೀಡೆ ಅಗತ್ಯ.ಅಲ್ಲದೆ ರಾಷ್ಟ್ರದ ಪ್ರಗತಿಗೆ ಉತ್ತಮ ಕ್ರೀಡಾ ಪಟುಗಳ ಅಗತ್ಯವಿದ್ದು, ತರಬೇತಿ ನೀಡಿ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಬೇಕು. ಅದಕ್ಕಾಗಿ ಮುಂದಿನ ಶೈಕ್ಷಣಿಕ ಸಾಲಿನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗುವ 50 ಮಂದಿ ಕ್ರೀಡಾಪಟುಗಳಿಗೆ ಆರ್ಥಿಕ ನೆರವು ನೀಡುವುದಾಗಿ ಅವರು ಭರವಸೆ ನೀಡಿದರು.ಶಿಕ್ಷಕ ವಿನೋದ್ ಪ್ರಸಾದ್ ಮಾತನಾಡಿ, ಯುವ ಪೀಳಿಗೆ ದೇಶದ ಅಭಿವೃದ್ಧಿಯ ಆಶಾ ಕಿರಣ ಎಂದರು.

ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ನಾಗರಾಜ್, ಪ್ರಸಕ್ತ ಸಾಲಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಅಂಗವಿಕಲರು ಸೇರಿದಂತೆ 10 ಕ್ರೀಡಾ ಪಟುಗಳು ಹಾಕಿ, ಕಬ್ಬಡಿ ಹಾಗೂ ಅಥ್ಲೆಟ್ಸ್‌ನ ವಿವಿಧ ವಿಭಾಗಗಳಲ್ಲಿ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿದ್ದು ಸಂತಸ ತಂದಿದೆ. ಕ್ರೀಡಾ ಕ್ಷೇತ್ರ ಅಭಿವೃದ್ಧಿಯತ್ತ ಸಾಗಲು ಪ್ರಾಯೋಜಕರು, ಸಂಘ ಸಂಸ್ಥೆಗಳು. ದಾನಿಗಳು ಗ್ರಾಮೀಣ ಪ್ರತಿಭೆಗಳಿಗೆ ನೆರವು ನೀಡಬೇಕಾಗಿದೆ ಎಂದರು.  ಪುರಸಭೆ ಅಧ್ಯಕ್ಷೆ ರತ್ನಮ್ಮ, ಕಾರ್ಯಕ್ರಮ ಉದ್ಘಾಟಿಸಿದರು. ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ, ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಮಲ್ಲಪ್ಪ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ನಾಗೇಶ್, ಕಾರ್ಯದರ್ಶಿ ದೇ.ಸು.ನಾಗರಾಜ್, ಜಿಲ್ಲಾ ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ಎ.ಚಿನ್ನಪ್ಪ, ತಾ.ಪಂ. ಅಧ್ಯಕ್ಷ ಬಿ.ಕೆ.ಶಿವಪ್ಪ, ಕ.ಸಾ.ಪ ಜಿಲ್ಲಾ ಖಜಾಂಚಿ ಯಾ.ಚಿ.ದೊಡ್ಡಯ್ಯ, ತಾಲ್ಲೂಕು ಮುಖ್ಯೋಪಾಧ್ಯಾಯರ ಸಂಘ ಅಧ್ಯಕ್ಷ ಸತೀಶ್, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷ ನಾಗೇಶ್, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಅಧ್ಯಕ್ಷ ಮುನಿಯಪ್ಪ, ತಾಲ್ಲೂಕು ಅಧ್ಯಕ್ಷ ಬೈಚಾಪುರ ಮುನಿಯಪ್ಪ, ಗೌರವಾಧ್ಯಕ್ಷ ಎಲ್.ಎಸ್.ಚಂದ್ರಪ್ಪ, ಕಾರ್ಯದರ್ಶಿ ಕೃಷ್ಣಮೂರ್ತಿ ಶಿಕ್ಷಣ ಸಂಯೋಜಕ ರವಿಪ್ರಕಾಶ್, ಶಿಕ್ಷಕ ಎಚ್.ಎಸ್.ರುದ್ರೇಶ್ ಮೂರ್ತಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.