ಬೆಂಗಳೂರು: ಬಿಬಿಎಂಪಿಯಲ್ಲಿ 2011-12ನೇ ಆರ್ಥಿಕ ವರ್ಷದ ಆಸ್ತಿ ತೆರಿಗೆ ಸಂಗ್ರಹ ಪ್ರಕ್ರಿಯೆ ಆರಂಭವಾಗಿ ತಿಂಗಳು ಪೂರ್ಣಗೊಂಡಿದ್ದು, ಈವರೆಗೆ ಸುಮಾರು 50 ಲಕ್ಷ ರೂಪಾಯಿ ಮೊತ್ತದ ಚೆಕ್ಗಳು ಬೌನ್ಸ್ ಆಗಿವೆ. ಸಂಬಂಧಪಟ್ಟ ಆಸ್ತಿದಾರರಿಗೆ ಪಾಲಿಕೆ ನೋಟಿಸ್ ನೀಡಿದೆ.

ಪ್ರಸಕ್ತ ಸಾಲಿನಲ್ಲಿ ಈವರೆಗೆ ಸುಮಾರು 4.09 ಲಕ್ಷ ಆಸ್ತಿದಾರರು ತೆರಿಗೆ ಪಾವತಿಸಿದ್ದು, 360 ಕೋಟಿ ರೂಪಾಯಿ ಸಂಗ್ರಹವಾಗಿದೆ. ಘನತ್ಯಾಜ್ಯ ಹಾಗೂ ವಿಲೇವಾರಿ ಉಪಕರ ಸುಮಾರು 13.26 ಕೋಟಿ ರೂಪಾಯಿ ಸಂಗ್ರಹವಾಗಿದೆ.

‘ಏಪ್ರಿಲ್ 30ರೊಳಗೆ ಆಸ್ತಿ ತೆರಿಗೆಯ ಪೂರ್ಣ ಮೊತ್ತ ಪಾವತಿಗೆ ಶೇ 5ರಷ್ಟು ರಿಯಾಯ್ತಿ ನೀಡುವುದಾಗಿ ಪ್ರಕಟಿಸಿದ್ದ ಕಾರಣ ಆಸ್ತಿದಾರರು ಉತ್ಸಾಹದಿಂದ ತೆರಿಗೆ ಪಾವತಿಸಿದ್ದು, ಈವರೆಗೆ 360 ಕೋಟಿ ರೂಪಾಯಿ ಸಂಗ್ರಹವಾಗಿದೆ’ ಎಂದು ಕಂದಾಯ ವಿಭಾಗದ ಉಪ ಆಯುಕ್ತ ರಮಾಕಾಂತ್ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.