ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

50 ವರ್ಷಗಳ ಹಿಂದೆ

Last Updated 19 ಜನವರಿ 2011, 19:30 IST
ಅಕ್ಷರ ಗಾತ್ರ

ಗುರುವಾರ, 20-1-1961

ಕಡಿಮೆ ವೆಚ್ಚದಲ್ಲಿ ಉತ್ತಮ ಶಾಲಾಕಟ್ಟಡಗಳ ನಿರ್ಮಾಣ

ಬೆಂಗಳೂರು, ಜ. 19 - ಕಡಿಮೆ ವೆಚ್ಚದಲ್ಲಿ ವಿದ್ಯಾರ್ಥಿಗಳ ಆರೋಗ್ಯಕ್ಕೆ ಹಿತಕರವಾದ ಹಾಗೂ ಶಿಕ್ಷಣಕ್ಕೆ ಸರ್ವಸೌಕರ್ಯಗಳಿರುವ ಶಾಲಾ ಕಟ್ಟಡಗಳ ನಿರ್ಮಾಣ ಮಾಡುವ ಪ್ರಶ್ನೆಗಳನ್ನು ಐದು ದಿನಗಳ ಕಾಲ ವಿಚಾರ ಮಾಡಲಿರುವ ಗೋಷ್ಠಿ  ಇಲ್ಲಿ ಆರಂಭವಾಯಿತು.

ನೌಕರರ ವೇತನದ ಬಗ್ಗೆ 3 ವಾರಗಳಲ್ಲಿ ನಿರ್ಧಾರ
ಬೆಂಗಳೂರು, ಜ. 19 - ರಾಜ್ಯದ ನೌಕರರ ಸಂಬಳ ಸಾರಿಗೆ ಪುನರ್ ವಿಮರ್ಶೆ ವಿಷಯದಲ್ಲಿ ಶಿಫಾರಸು ಮಾಡಲು ಸರ್ಕಾರ ನೇಮಿಸಿರುವ ಸಮಿತಿಯ ಶಿಫಾರಸುಗಳ ಬಗ್ಗೆ ರಾಜ್ಯ ಸರ್ಕಾರ ಇನ್ನು ಮೂರು ವಾರಗಳಲ್ಲಿ ನಿರ್ಧಾರ ಕೈಗೊಳ್ಳುವ ಸಂಭವವಿದೆಯೆಂದು ಮುಖ್ಯಮಂತ್ರಿ ಶ್ರೀ ಬಿ. ಡಿ. ಜತ್ತಿ ವರದಿಗಾರರಿಗೆ ತಿಳಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT