ಮೈಸೂರು: `ಕನ್ನಡ ಭಾಷಾ ಬಳಕೆ ಮತ್ತು ಅಭಿವೃದ್ಧಿ ದೃಷ್ಟಿಯಿಂದ ತಂತ್ರಾಶದಲ್ಲಿ ಕನ್ನಡವನ್ನು ಹೆಚ್ಚಾಗಿ ಬಳಸುವ ಅಗತ್ಯವಿದೆ~ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯುಕ್ತ ಮನು ಬಳಿಗಾರ್ ಅಭಿಪ್ರಾಯಪಟ್ಟರು

ಮಹಾರಾಜ ಕಾಲೇಜು ಆವರಣದ ಶತಮಾನೋತ್ಸವ ಭವನದಲ್ಲಿ ಮೈಸೂರು ವಿವಿ ಕುವೆಂಪು ಕನ್ನಡ ಅಧ್ಯ ಯನ ಸಂಸ್ಥೆ ಶುಕ್ರವಾರ ಏರ್ಪಡಿಸಿದ್ದ `ಧರ್ಮಶಾಸ್ತ್ರ ಇತಿಹಾಸ~ ಹಾಗೂ ಇತರೆ 52 ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.

`2008ರ ಅಕ್ಟೋಬರ್ 31ರಂದು ಕೇಂದ್ರ ಸರ್ಕಾರ ಕನ್ನಡಕ್ಕೆ ಶಾಸ್ತ್ರೀಯ ಭಾಷಾ ಸ್ಥಾನಮಾನ ನೀಡಿ ಗೌರವಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕನ್ನಡದ ಅಭಿವೃದ್ಧಿಗಾಗಿ 11 ವಿವಿಗಳಿಗೆ ತಲಾ ರೂ. 22 ಕೋಟಿ ಅನುದಾನ ಮೀಸಲಿಟ್ಟು, 11 ಕೋಟಿಯನ್ನು ಬಿಡುಗಡೆ ಮಾಡಿತ್ತು. ಆ ಅನುದಾನ ಬಳಸಿಕೊಂಡು 54 ಮಹತ್ವದ ಕೃತಿಗಳನ್ನು ಹೊರ ತಂದಿರುವುದು ಸ್ವಾಗತಾರ್ಹ. ರೂ. 1 ಕೋಟಿಯನ್ನು ಸಂಪೂರ್ಣವಾಗಿ ಬಳಸಿಕೊಂಡರೆ ಮತ್ತೆ ಪ್ರತಿ ವಿವಿಗಳಿಗೆ ರೂ. 30 ಲಕ್ಷ ಅನುದಾನ ನೀಡಲಾಗುವುದು~ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ.ರಾಮದಾಸ್ ಮಾತನಾಡಿ, `ವಿಶ್ವವಿದ್ಯಾನಿಲಯಗಳು ಪುಸ್ತಕ ಪ್ರಕಟಣೆ ಮಾಡಿದರೆ ಸಾಲದು. ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಹಾಗೂ ಜ್ಞಾನದ ಅಭಿರುಚಿಯನ್ನು ಬೆಳೆಸಬೇಕು. ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಮಾತ್ರ ಸೀಮಿತವಾಗದೆ ಸಾಹಿತ್ಯ ಪುಸ್ತಕಗಳನ್ನು ಓದುವ ಮನೋಭಾವ ರೂಡಿಸಿಕೊಳ್ಳಬೇಕು~ ಎಂದು ಹೇಳಿದರು.

ಕುಲಪತಿ ಪ್ರೊ.ವಿ.ಜಿ.ತಳವಾರ್, ಕುಲಸಚಿವ ಪ್ರೊ.ಪಿ.ಎಸ್.ನಾಯಕ್, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಪ್ರೊ.ಕೆ.ಎನ್.ಗಂಗಾನಾಯಕ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.