ಬುಧವಾರ, ಜನವರಿ 22, 2020
17 °C

56 ಜನರಿಗೆ ಉಚಿತ ಶಸ್ತ್ರಚಿಕಿತ್ಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊನ್ನಾವರ: ಸ್ಥಳೀಯ ರೋಟರಿ ಕ್ಲಬ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಅಂಧತ್ವ ನಿವಾರಣಾ ಸಂಘದ ಆಶ್ರಯದಲ್ಲಿ ಏರ್ಪಡಿಸಿದ್ದ ಕಣ್ಣಿನ ಉಚಿತ ಚಿಕಿತ್ಸಾ ಶಿಬಿರ 56 ಜನರ  ನೇತ್ರ ಶಸ್ತ್ರ ಚಿಕಿತ್ಸೆ ನಡೆಸಿ ಅವರಿಗೆ ಕನ್ನಡಕ ಹಾಗೂ ಔಷಧ ವಿತರಿಸಲಾಯಿತು.ಉಡುಪಿಯ ನರೇಂದ್ರ  ಶೆಣೈ ಹಾಗೂ ಅವರ ನೇತೃತ್ವದ ವೈದ್ಯಕೀಯ ತಂಡ ಶಸ್ತ್ರ ಚಿಕಿತ್ಸೆ ನೆವೇರಿಸಿತು. ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ನರೇಂದ್ರ ಶೆಣೈ, ಕಣ್ಣುಗಳನ್ನು ರಕ್ಷಿಸಿಕೊಳ್ಳಲು ಅನುಸರಿಸಬೇಕಾದ ಕ್ರಮಗಳನ್ನು ವಿವರಿಸಿದರು.

ಎಸ್.ಎಂ.ಭಟ್ಟ ಸ್ವಾಗತಿಸಿದರು. ರೋಟರಿ ಅಧ್ಯಕ್ಷ ಪ್ರೊ.ಆರ್.ವಿ.ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ವಿ.ಜಿ. ನಾಯ್ಕ ವಂದಿಸಿದರು. ಡಾ.ಕಿರಣ ಬಳ್ಕೂರ್, ಡಾ.ಇಸ್ಮಾಯಿಲ್ ತಲಖಣಿ ಮುಂತಾದವರು ಉಪಸ್ಥಿತರಿದ್ದರು.

ಪ್ರತಿಕ್ರಿಯಿಸಿ (+)