6ರಂದು ಸಮಾವೇಶ

7

6ರಂದು ಸಮಾವೇಶ

Published:
Updated:

ಬೆಂಗಳೂರು: ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಸಮಾವೇಶ ಜ.6ರಂದು ಮಧ್ಯಾಹ್ನ 1ಕ್ಕೆ ನಗರದ ಅರಮನೆ ಮೈದಾನದ ಕಿಂಗ್ಸ್‌ಕೋರ್ಟ್‌ ಆವರಣದಲ್ಲಿ ನಡೆಯಲಿದೆ.ರಾಜ್ಯಮಟ್ಟದ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು ಹಾಗೂ ಜಿಲ್ಲಾ ಪದಾಧಿಕಾರಿಗಳ ಮತ್ತು ಬ್ಲಾಕ್‌ ಅಧ್ಯಕ್ಷರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಎನ್‌. ಮಂಜುನಾಥ್‌ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಪ್ರಮುಖವಾಗಿ ಮುಂದಿನ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಪರಿಶಿಷ್ಟರಿಗೆ ರೂಪಿಸುವ ಕಾರ್ಯಕ್ರಮಗಳನ್ನು ಸೇರಿಸುವ ಬಗ್ಗೆ ಸಮಾವೇಶದಲ್ಲಿ  ಚರ್ಚಿಸಲಾಗುವುದು ಎಂದು ತಿಳಿಸಿದರು.ಎಐಸಿಸಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಕೆ. ರಾಜು ಸಮಾವೇಶ ಉದ್ಘಾಟಿಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್‌, ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್‌ಸಿಂಗ್‌ ಸೇರಿದಂತೆ ಹಲವು ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry