6 ತಿಂಗಳೊಳಗೆ ಎಲ್ಲ ಶಾಲೆಗಳಲ್ಲಿ ಶೌಚಾಲಯವಿರಬೇಕು - ಸುಪ್ರೀಂ

7

6 ತಿಂಗಳೊಳಗೆ ಎಲ್ಲ ಶಾಲೆಗಳಲ್ಲಿ ಶೌಚಾಲಯವಿರಬೇಕು - ಸುಪ್ರೀಂ

Published:
Updated:

ನವದೆಹಲಿ (ಪಿಟಿಐ): ದೇಶದ ಎಲ್ಲ ಶಾಲೆಗಳಲ್ಲಿ 6 ತಿಂಗಳೊಳಗೆ ಕುಡಿಯುವ ನೀರು ಮತ್ತು ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಕಲ್ಪಿಸಬೇಕು ಎಂದು ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಹಾಗೂ ರಾಜ್ಯಗಳಿಗೆ ನಿರ್ದೇಶನ ನೀಡಿದೆ.

 

ದೇಶದಾದ್ಯಂತ ಇರುವ ಎಲ್ಲ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಸರ್ಕಾರಗಳು ಕ್ರಮಕೈಗೊಳ್ಳಬೇಕು ಎಂದು ಹೇಳಿರುವ ನ್ಯಾಯಮೂರ್ತಿ ಕೆ.ಎಸ್.ರಾಧಾಕೃಷ್ಣನ್ ಅವರ ನೇತೃತ್ವದ ನ್ಯಾಯಪೀಠವು ಅದಕ್ಕಾಗಿ 6 ತಿಂಗಳ ಕಾಲಮಿತಿ ವಿಧಿಸಿದೆ. ಅಲ್ಲದೇ, ಪೀಠವು ಈ ಹಿಂದೆ ಶಾಲೆಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ನು ಸಹ 6 ತಿಂಗಳಲ್ಲಿ ಅನುಷ್ಟಾನಗೊಳಿಸಬೇಕು ಎಂದು ಹೇಳಿದೆ.

 

ಕಳೆದ ವರ್ಷದ ಅಕ್ಟೊಬರ್ 18 ರಂದು ಸುಪ್ರಿಂ ಕೋರ್ಟ್ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ನಿರ್ಮಿಸುವಂತೆ ಎಲ್ಲ ರಾಜ್ಯಗಳು ಸೇರಿದಂತೆ ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿತ್ತು. ಇದು ಸರಿಯಾಗಿ ಅನುಷ್ಟಾನಗೊಳ್ಳದ ಕಾರಣ ಇದನ್ನು ಪ್ರಶ್ನಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದರ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಕೇಂದ್ರ ಹಾಗೂ ರಾಜ್ಯಗಳಿಗೆ 6 ತಿಂಗಳ ಕಾಲಮಿತಿಯ ನಿರ್ದೇಶನ ನೀಡಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry