ಶನಿವಾರ, ನವೆಂಬರ್ 23, 2019
17 °C

60 ಎಸ್‌ಐಗಳ ವರ್ಗಾವಣೆ

Published:
Updated:

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಸೂಚನೆ ಮೇರೆಗೆ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿನ 60 ಮಂದಿ ಎಸ್‌ಐಗಳನ್ನು ವರ್ಗಾವಣೆ ಮಾಡಿ ನಗರ ಪೊಲೀಸ್ ಕಮಿಷನರ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ.ಒಂದೇ ಠಾಣೆಯಲ್ಲಿ ಅಥವಾ ಒಂದೇ ಉಪ ವಿಭಾಗದ ಠಾಣೆಗಳಲ್ಲಿ ಮೂರು ವರ್ಷಗಳ ಕಾಲ ಕಾರ್ಯ ನಿರ್ವಹಿಸಿರುವ, ವಾಸವಿರುವ ಮನೆಯ ವಿಳಾಸ ಮತ್ತು ಕರ್ತವ್ಯ ನಿರ್ವಹಿಸುತ್ತಿರುವ ಠಾಣೆಯ ವಿಧಾನಸಭಾ ಕ್ಷೇತ್ರ ಒಂದೇ ಆಗಿರುವ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ.ವರ್ಗಾವಣೆಗೊಂಡ ಎಸ್‌ಐಗಳು ಸೂಚಿಸಿರುವ ಠಾಣೆಯಲ್ಲಿ ಕೂಡಲೇ ಕರ್ತವ್ಯಕ್ಕೆ ಹಾಜರಾಗಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರತಿಕ್ರಿಯಿಸಿ (+)