ಕೊಪ್ಪಳ: ಪ್ರಸಕ್ತ ಸಾಲಿನ ವಿವಿಧ ಅಭಿವೃದ್ಧಿ ಯೋಜನೆಗಳಿಗಾಗಿ 67.94 ಕೋಟಿ ರೂಪಾಯಿಗಳ ಕ್ರಿಯಾ ಯೋಜನೆಗೆ ಜಿಲ್ಲಾ ಪಂಚಾಯಿತಿ ಅನುಮೋದನೆ ನೀಡಿದೆ.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಸಾಮಾನ್ಯ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎನ್.ಬಿಲ್ಗಾರ್ ಈ ವಿಷಯ ಪ್ರಕಟಿಸಿದರು. 2011-12ನೇ ಸಾಲಿನಲ್ಲಿ 55.84 ಕೋಟಿ ರೂಪಾಯಿಗಳ ಕ್ರಿಯಾ ಯೋಜನೆಗೆ ಅನುಮೋದನೆ ಪಡೆಯಲಾಗಿತ್ತು. ಇದರಿಂದಾಗಿ ಈ ಬಾರಿಯ ಕ್ರಿಯಾ ಯೋಜನೆಯಲ್ಲಿ 12.10 ಕೋಟಿ ರೂಪಾಯಿಗಳ ಹೆಚ್ಚುವರಿ ಅನುದಾನ ನಿಗದಿಪಡಿಸಿದಂತಾಗಿದೆ.

ಪ್ರಸಕ್ತ ಸಾಲಿನ ರೂ. 67.94 ಕೋಟಿ (6,794.12 ಲಕ್ಷ ರೂಪಾಯಿ) ಕ್ರಿಯಾ ಯೋಜನೆಯಲ್ಲಿ ಕೇಂದ್ರದ ಪಾಲು 8.52 ಕೋಟಿ ರೂಪಾಯಿ (852.44 ಲಕ್ಷ ರೂಪಾಯಿ), ರಾಜ್ಯದ ಪಾಲಿನ ಮೊತ್ತ 59.41 ಕೋಟಿ ರೂಪಾಯಿ (5941.68 ಲಕ್ಷ ರೂಪಾಯಿಗಳು) ಎಂದು ಅಧಿಕಾರಿಗಳು ಸಭೆಗೆ ವಿವರಿಸಿದರು. ಈ ಬಾರಿಯ ಕ್ರಿಯಾ ಯೋಜನೆಯಲ್ಲಿ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಲಾಗಿದೆ. ಒಟ್ಟು 3416.22 ಲಕ್ಷ ರೂಪಾಯಿಗಳನ್ನು ಕಾಯ್ದಿರಿಸಲಾಗಿದೆ ಎಂದು ಅಧ್ಯಕ್ಷೆ ಜ್ಯೋತಿ ಬಿಲ್ಗಾರ್ ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಟಿ.ಪಿ.ದಂಡಿಗದಾಸರ್ ಮಾತನಾಡಿ, ಪ್ರಸಕ್ತ ಸಾಲಿಗಾಗಿ ಜಿಲ್ಲಾ ಪಂಚಾಯಿತಿಗೆ 6794.12 ಲಕ್ಷ, ತಾಲ್ಲೂಕು ಪಂಚಾಯಿತಿಗೆ 4955.11 ಲಕ್ಷ ಹಾಗೂ ಗ್ರಾಮ ಪಂಚಾಯಿತಿಗೆ 2840.91 ಲಕ್ಷ ಸೇರಿದಂತೆ ಒಟ್ಟು 142.30 ಕೋಟಿ ರೂಪಾಯಿಗಳ ಅನುದಾನವನ್ನು ಸರ್ಕಾರ ನಿಗದಿಪಡಿಸಿದೆ ಎಂದು ಸಭೆಯ ಗಮನಕ್ಕೆ ತಂದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಡಾ.ಸೀತಾ ಹಲಗೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ರಾಜಾರಾಂ, ಉಪಕಾರ್ಯದರ್ಶಿ ಅನ್ನದಾನಯ್ಯ, ಜಿಲ್ಲಾ ಪಂಚಾಯಿತಿ ಸದಸ್ಯರು, ತಾಲ್ಲೂಕು ಪಂಚಾಯಿತಿಗಳ ಅಧ್ಯಕ್ಷರು, ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.