ಶನಿವಾರ, ಜೂನ್ 19, 2021
28 °C

7ರಿಂದ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜೆ.ಎಸ್.ಎಸ್. ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರವು ಕೇಂದ್ರ ಲೋಕಸೇವಾ ಆಯೋಗವು 2011ರಲ್ಲಿ ನಡೆಸಿರುವ ಭಾರತೀಯ ಆಡಳಿತ ಸೇವೆಯ ಮುಖ್ಯ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಮಾರ್ಚ್/ ಏಪ್ರಿಲ್ ತಿಂಗಳಲ್ಲಿ ಸಂದರ್ಶನಕ್ಕೆ ಅರ್ಹವಾಗಿರುವ ಅಭ್ಯರ್ಥಿಗಳಿಗಾಗಿ ಮಾರ್ಚ್ 7 ರಿಂದ 15 ವರೆಗೆ ಪೂರ್ವಭಾವಿ ತರಬೇತಿಯನ್ನು ಆಯೋಜಿಸಿದೆ.ವಿಳಾಸ: ಜೆ.ಎಸ್.ಎಸ್. ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ, 1ನೇ ಮುಖ್ಯ ರಸ್ತೆ, 8ನೇ ಬ್ಲಾಕ್, 38ನೇ ಅಡ್ಡರಸ್ತೆ, ಶಿವರಾತ್ರೀಶ್ವರ ವೃತ್ತ, ಜಯನಗರ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 22970113/4.ಅರ್ಜಿ ಅಹ್ವಾನಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಸುಧಾರಣಾ ಸಂಸ್ಥೆಗಳಿಗೆ ಸಮಾಲೋಚಕರ ಮೂರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.ಅಭ್ಯರ್ಥಿಗಳು ಮನಃಶಾಸ್ತ್ರ /ಎಂ.ಎಸ್.ಡಬ್ಲು ವಿಷಯದಲ್ಲಿ ಸ್ನಾತಕೋತ್ತರ ಪದವಿ ಗಳಿಸಿರಬೇಕು. ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಎರಡು ವರ್ಷ ಕೆಲಸ ಮಾಡಿದ ಅನುಭವ ಹಾಗೂ 40 ವರ್ಷ ಒಳಗಿನವರಾಗಿರಬೇಕು. ಅರ್ಹ ಅಭ್ಯರ್ಥಿಗಳು ಮಾರ್ಚ್ 30 ರೊಳಗಾಗಿ ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ. ಎಂ.ಎಚ್.ಮರಿಗೌಡ ರಸ್ತೆ, ಕಿದ್ವಾಯಿ ಆಸ್ಪತ್ರೆ ಹತ್ತಿರ ಬೆಂಗಳೂರು-29, ಇಲ್ಲಿ ಸಂಪರ್ಕಿಸಬಹುದು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.