7 ಕೋಟಿ ಮೌಲ್ಯದ ಮಾದಕ ವಸ್ತು ವಶ

ಶನಿವಾರ, ಜೂಲೈ 20, 2019
22 °C

7 ಕೋಟಿ ಮೌಲ್ಯದ ಮಾದಕ ವಸ್ತು ವಶ

Published:
Updated:

ಚೆನ್ನೈ (ಪಿಟಿಐ): ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಲೇಷ್ಯಾಕ್ಕೆ ಕೊಂಡೊಯ್ಯಲು ಯತ್ನಿಸಿದ ಏಳು ಕೋಟಿ ರೂಪಾಯಿ ಮೌಲ್ಯದ ವಿವಿಧ ಮಾದಕ ವಸ್ತುಗಳನ್ನು ವಿಮಾನ ನಿಲ್ದಾಣದ ಸರಕು ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.ಸಾಗಣೆ ಬಗ್ಗೆ ತೆರಿಗೆ ಇಲಾಖೆಯು ಸುಳಿವು ನೀಡಿತ್ತು. 60 ಪೆಟ್ಟಿಗಳಲ್ಲಿದ್ದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹಣ್ಣು ರಫ್ತು ಮಾಡುವ ಪೆಟ್ಟಿಗೆಗಳಲ್ಲಿ ಮಾದಕ ವಸ್ತುಗಳನ್ನು ಅಡಗಿಸಿಡಲಾಗಿತ್ತು ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.ವಶಪಡಿಸಿಕೊಂಡಿರುವ ಮಾದಕ ವಸ್ತುಗಳನ್ನು ಮಲೇಷ್ಯಾಕ್ಕೆ ಯಾರು ಕಳುಹಿಸುತ್ತಿದ್ದರು ಮತ್ತು ಇದನ್ನು ಅಲ್ಲಿ ಯಾರು ಸ್ವೀಕರಿಸುತ್ತಿದ್ದರು ಎಂಬ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮೂಲಗಳು ಹೇಳಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry