ಬುಧವಾರ, ನವೆಂಬರ್ 20, 2019
24 °C
53 ಅಭ್ಯರ್ಥಿಗಳ ಉಮೇದುವಾರಿಕೆ ಕ್ರಮಬದ್ಧ

7 ನಾಮಪತ್ರ ತಿರಸ್ಕೃತ

Published:
Updated:

ಚಾಮರಾಜನಗರ: ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಸಲ್ಲಿಕೆಯಾಗಿರುವ ನಾಮಪತ್ರಗಳ ಪರಿಶೀಲನಾ ಕಾರ್ಯ ಗುರುವಾರ ನಡೆದಿದ್ದು, ಒಟ್ಟು 7 ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಂಡಿವೆ. ಅಂತಿಮವಾಗಿ 53 ಅಭ್ಯರ್ಥಿಗಳ ನಾಮಪತ್ರ ಸಿಂಧುವಾಗಿವೆ.ಚಾಮರಾಜನಗರ ಕ್ಷೇತ್ರದಲ್ಲಿ ಪಿ. ಸಂಘಸೇನಾ (ಆರ್‌ಪಿಐ), ಎಂ. ಹೊನ್ನೂರಯ್ಯ (ಪಕ್ಷೇತರ), ಎ.ಎಚ್. ಶ್ರೀಕಂಠಮೂರ್ತಿ (ಪಕ್ಷೇತರ) ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿವೆ. ಉಳಿದ 15 ಅಭ್ಯರ್ಥಿಗಳು ಸಲ್ಲಿಸಿರುವ ನಾಮಪತ್ರ ಕ್ರಮಬದ್ಧವಾಗಿವೆ.ಕೊಳ್ಳೇಗಾಲ ಕ್ಷೇತ್ರದಲ್ಲಿ 14 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ ಕೃಷ್ಣಸ್ವಾಮಿ (ಪಕ್ಷೇತರ) ಹಾಗೂ ಮಹದೇವ (ಪಕ್ಷೇತರ) ಅವರ ನಾಮಪತ್ರ ತಿರಸ್ಕೃತವಾಗಿವೆ. ಅಂತಿಮವಾಗಿ 12 ಅಭ್ಯರ್ಥಿಗಳ ಉಮೇದುವಾರಿಕೆ ಸಿಂಧುವಾಗಿದೆ.ಹನೂರು ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ ಕೆ.ಎನ್. ಪ್ರೀತನ್ (ಜೆಡಿಎಸ್) ಹಾಗೂ ಭುವನೇಂದ್ರ (ಭಾರತೀಯ ಡಾ.ಬಿ.ಆರ್. ಅಂಬೇಡ್ಕರ್ ಪಾರ್ಟಿ) ಅವರ ನಾಮಪತ್ರ ತಿರಸ್ಕೃತಗೊಂಡಿವೆ. ಅಂತಿಮವಾಗಿ 14 ಅಭ್ಯರ್ಥಿಗಳ ಉಮೇದುವಾರಿಕೆ ಕ್ರಮಬದ್ಧವಾಗಿದೆ.ಗುಂಡ್ಲುಪೇಟೆ ಕ್ಷೇತ್ರದಲ್ಲಿ ಉಮೇದುವಾರಿಕೆ ಸಲ್ಲಿಸಿದ್ದ ಎಲ್ಲ 12 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿವೆ ಎಂದು ಪ್ರಕಟಣೆ ತಿಳಿಸಿದೆ.

ಪ್ರತಿಕ್ರಿಯಿಸಿ (+)