ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

7 ಕೋಟಿ ಮೌಲ್ಯದ ಮಾದಕ ವಸ್ತು ವಶ

Last Updated 21 ಜುಲೈ 2012, 19:30 IST
ಅಕ್ಷರ ಗಾತ್ರ

ಚೆನ್ನೈ (ಪಿಟಿಐ): ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಲೇಷ್ಯಾಕ್ಕೆ ಕೊಂಡೊಯ್ಯಲು ಯತ್ನಿಸಿದ ಏಳು ಕೋಟಿ ರೂಪಾಯಿ ಮೌಲ್ಯದ ವಿವಿಧ ಮಾದಕ ವಸ್ತುಗಳನ್ನು ವಿಮಾನ ನಿಲ್ದಾಣದ ಸರಕು ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.

ಸಾಗಣೆ ಬಗ್ಗೆ ತೆರಿಗೆ ಇಲಾಖೆಯು ಸುಳಿವು ನೀಡಿತ್ತು. 60 ಪೆಟ್ಟಿಗಳಲ್ಲಿದ್ದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹಣ್ಣು ರಫ್ತು ಮಾಡುವ ಪೆಟ್ಟಿಗೆಗಳಲ್ಲಿ ಮಾದಕ ವಸ್ತುಗಳನ್ನು ಅಡಗಿಸಿಡಲಾಗಿತ್ತು ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ವಶಪಡಿಸಿಕೊಂಡಿರುವ ಮಾದಕ ವಸ್ತುಗಳನ್ನು ಮಲೇಷ್ಯಾಕ್ಕೆ ಯಾರು ಕಳುಹಿಸುತ್ತಿದ್ದರು ಮತ್ತು ಇದನ್ನು ಅಲ್ಲಿ ಯಾರು ಸ್ವೀಕರಿಸುತ್ತಿದ್ದರು ಎಂಬ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT