70 ಕೋಟಿ ಕ್ರಿಯಾ ಯೋಜನೆ

7

70 ಕೋಟಿ ಕ್ರಿಯಾ ಯೋಜನೆ

Published:
Updated:
70 ಕೋಟಿ ಕ್ರಿಯಾ ಯೋಜನೆ

ಚಿಕ್ಕಮಗಳೂರು: ಉದ್ಯೋಗ ಖಾತರಿ ಯೋಜನೆ ಯಡಿ 70 ಕೋಟಿ ರೂಪಾಯಿ ಕ್ರಿಯಾ ಯೋಜನೆ ತಯಾರಿಸಿದ್ದು, ಅನುದಾನವನ್ನು ಗ್ರಾಮಗಳ ಅಭಿವೃದ್ಧಿ ಕೆಲಸಗಳಿಗೆ ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬೇಕು. ಉದ್ಯೋಗ ಖಾತರಿ ಯೋಜನೆಯಡಿ ಕಳಪೆ ಕಾಮಗಾರಿಯಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಂಜುನಾಥ್ ಸೂಚಿಸಿದರು.ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸರ್ವ ಸದಸ್ಯರ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚುನಾಯಿತಿ ಪ್ರತಿನಿಧಿಗಳೊಂದಿಗೆ ಅಧಿಕಾರಿಗಳು ಸೌಹಾರ್ದ ರೀತಿಯಲ್ಲಿ ನಡೆದುಕೊಂಡು, ಸರ್ಕಾರದಿಂದ ಬರುವ ಅನುದಾನಗಳ ಬಗ್ಗೆ ಚರ್ಚಿಸಿ ಅಗತ್ಯ ಕಾಮಗಾರಿ ಕೈಗೊಳ್ಳಬೇಕು ಎಂದರು.ವಸತಿ ಯೋಜನೆ ಪ್ರಗತಿ ಕುಂಠಿತವಾಗಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅರ್ಹ ಫಲಾನುಭವಿಗಳನ್ನು ಗುರುತಿಸಿ ಈ ಯೋಜನೆಯಲ್ಲಿ ಪ್ರಗತಿ ಸಾಧಿಸಬೇಕು. ಶೌಚಾಲಯ ಕಟ್ಟಲು ನೀಡುವ ಹಣವನ್ನು ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ಹಾಗೆಯೇ ಉಳಿಸಿಕೊಂಡಿದ್ದಾರೆ. ತಕ್ಷಣವೇ ಶೌಚಾ ಲಯ ನಿರ್ಮಾಣ ಮಾಡುವವರಿಗೆ ಹಣ ನೀಡಬೇಕು. ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ ಯಾವುದೇ ಕಾಯಿಲೆಗಳು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು.

 

ಸಾಮಾಜಿಕ ಅರಣ್ಯ ಇಲಾಖೆ ಯಿಂದ ಸಿಲ್ವರ್ ಸಸಿಗಳನ್ನು ಅರ್ಹ ಫಲಾನುಭವಿಗಳಿ ಗೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಗ್ರಾ.ಪಂ. ವ್ಯಾಪ್ತಿಯಲ್ಲಿ ಕಾಮಗಾರಿಗಳು ಗುಣಮಟ್ಟದಲ್ಲಿ ಆಗದಿದ್ದರೆ ಪಂಚಾಯಿತಿ ಅಧ್ಯಕ್ಷರು, ಪಿಡಿಒ ಹಾಗೂ ಕಾರ್ಯದರ್ಶಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು.ಜಾಬ್ ಕಾರ್ಡ್‌ಗಳಿಗೆ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೆ ಬರಲಿದ್ದು, ಕೆಲಸಗಾರರ ಖಾತೆಗೆ ನೇರವಾಗಿ ಹಣ ಜಮೆಯಾಗುವ ವ್ಯವಸ್ಥೆ ಬರಲಿದೆ ಎಂದು ತಿಳಿಸಿದರು. ಸ್ಥಾಯಿ ಸಮಿತಿ ಅಧ್ಯಕ್ಷೆ ಅಂಬಿಕಾ ಶಿವಕುಮಾರ್, ಮಾಜಿ ಅಧ್ಯಕ್ಷ ಕನಕರಾಜ್, ಕಾರ್ಯನಿರ್ವಹ ಣಾಧಿಕಾರಿ ಮೃತ್ಯುಂಜಯ ಹಾಗೂ ತಾ.ಪಂ. ಸದ ಸ್ಯರು, ಪಿಡಿಒ ಮತ್ತು ಗ್ರಾ.ಪಂ. ಕಾರ್ಯದರ್ಶಿಗಳು  ಸಭೆಯಲ್ಲಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry