70 ಶಾಲೆಗಳಿಗೆ ಕುಡಿಯುವ ನೀರಿನ ಸೌಲಭ್ಯ

7

70 ಶಾಲೆಗಳಿಗೆ ಕುಡಿಯುವ ನೀರಿನ ಸೌಲಭ್ಯ

Published:
Updated:

ದೊಡ್ಡಬಳ್ಳಾಪುರ: ಯಾವುದೇ ವ್ಯಕ್ತಿ ತನ್ನ ಶೈಕ್ಷಣಿಕ ಅವಧಿಯಲ್ಲಿ ಕಲಿತಿದ್ದನ್ನು ಜೀವನದುದ್ದಕ್ಕೂ ಮರೆಯುವುದಿಲ್ಲ. ಈ ಹಿನ್ನೆಲೆಯಲ್ಲಿ ಶಿಕ್ಷಕರ ಜವಾಬ್ದಾರಿ ಮಹತ್ತರವಾಗಿದೆ ಎಂದು ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಎನ್.ಹನುಮಂತೇಗೌಡ ಹೇಳಿದರು.ಅವರು ಗುರುವಾರ ನಗರದ ಮಾಂಗಲ್ಯ ಕಲ್ಯಾಣ ಮಂದಿರದಲ್ಲಿ ನಡೆದ ಡಾ.ಸರ್ವಪಲ್ಲಿ ರಾಧಕೃಷ್ಣ ಅವರ ಜನ್ಮ ದಿನಾಚರಣೆ ಮತ್ತು ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ತಾಲ್ಲೂಕಿನ 70 ಶಾಲೆಗಳಿಗೆ ಈ ವರ್ಷ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಆದ್ಯತೆ ನೀಡಲಾಗಿದೆ. ತಾಲ್ಲೂಕಿನ ಸರ್ಕಾರಿ ಶಾಲೆಗಳಲ್ಲಿ   ದೈಹಿಕ ಶಿಕ್ಷಕರ ಕೊರತೆ ಇದೆ. ಇದನ್ನು ನೀಗಿಸಲು ಈಗಾಗಲೇ ಸೂಕ್ರ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, `ಪ್ರತಿಯೊಬ್ಬರ ಬದುಕಿನ ಮೇಲೂ  ಶಿಕ್ಷಕರ ಪ್ರಭಾವ ಇದ್ದೇ ಇರುತ್ತದೆ. ಹಾಗೆಯೇ ನನ್ನ ಬದುಕಿನ ಮೇಲೂ ಸಹ ಶಿಕ್ಷಕರೊಬ್ಬರ ಪ್ರಭಾವವೇ ಜೀವನದಲ್ಲಿ ಉನ್ನತ ಸ್ಥಾನಕ್ಕೆ ಏರಲು ಪ್ರೇರಣೆಯಾಗಿದೆ' ಎಂದರು.`ಪ್ರಾಥಮಿಕ ಶಿಕ್ಷಣ ಬಲಪಡಿಸಲು ಹತ್ತಾರು ಯೋಜನೆಗಳನ್ನು ಅನುಷ್ಠಾನಗೊಳಿಸಲು ಹೊಸ ಸರ್ಕಾರ ಮುಂದಾಗಿದೆ' ಎಂದು ಹೇಳಿದರು.

`ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರ ಮನೆ ಬಾಡಿಗೆ ಭತ್ಯೆಯನ್ನು ಮುಂದಿನ ತಿಂಗಳಿಂದ ಶೇ.7 ರಿಂದ 10ಕ್ಕೆ ಹೆಚ್ಚಿಸಲಾಗಿದೆ. ಇದು ಅಕ್ಟೋಬರ್ 1 ರಿಂದ ಜಾರಿಗೆ ಬರಲಿದೆ' ಎಂದು ಶಾಸಕರು ತಿಳಿಸಿದರು.ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಡಿ.ನಾಗರಾಜ್, ಜಿಲ್ಲಾ ಪಂಚಾಯ್ತಿ ಸದಸ್ಯೆ ಉಮಾಬಾಯಿ ಗೋಪಾಲ್ ನಾಯ್ಕ, ಭಾರತ ಸೇವಾದಳ ತಾಲ್ಲೂಕು ಅಧ್ಯಕ್ಷ ತಿ.ರಂಗರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್.ತಿಮ್ಮೇಗೌಡ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಶಿವರಾಜ್, ಪ್ರಾಥಮಿ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಬಿ.ಎಸ್.ಸಿದ್ದಗಂಗಯ್ಯ, ಕಾರ್ಯದರ್ಶಿ ಕೆ.ಮಲ್ಲಿಕಾರ್ಜುನ ರೆಡ್ಡಿ, ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ  ಎಂ.ಸುಧೀಂದ್ರನಾಥ್,  ಖಾಸಗಿ ಅನುದಾನಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಸಿದ್ದಗಂಗಾ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಮಂಜುನಾಥ್ ಜುಟ್ಟಯ್ಯ, ನಗರಸಭೆ ಸದಸ್ಯ ಜಿ.ರಘುರಾಂ, ಯುವ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ಎಂ.ವೆಂಕಟೇಶ್, ತಾಲ್ಲೂಕು ಕೃಷಿಕ ಸಮಾಜದ ಉಪಾಧ್ಯಕ್ಷ ವಿಜಯ್‌ಕುಮಾರ್, ಕ್ಷೇತ್ರ ದೈಹಿಕ ಶಿಕ್ಷಕರ ಸಂಯೋಜಕ ಬಿ.ಜಿ.ಅಮರ್‌ನಾಥ್, ದೈಹಿಕ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಕುಬೇರಪ್ಪ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಚನ್ನಪ್ಪ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry