ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

7ಲಕ್ಷ ಮೌಲ್ಯದ ಆಭರಣ ಕಳವು

Last Updated 25 ಫೆಬ್ರುವರಿ 2011, 19:45 IST
ಅಕ್ಷರ ಗಾತ್ರ

ಬೆಂಗಳೂರು: ದುಷ್ಕರ್ಮಿಗಳು ಕಾರಿನ ಗಾಜು ಒಡೆದು ವಾಹನದಲ್ಲಿದ್ದ ಸುಮಾರು ಏಳು ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು 20 ಸಾವಿರ ನಗದು ಕಳವು ಮಾಡಿರುವ ಘಟನೆ ಇನ್‌ಫೆಂಟ್ರಿ ರಸ್ತೆಯಲ್ಲಿ ಗುರುವಾರ ರಾತ್ರಿ ನಡೆದಿದೆ.

ಈ ಬಗ್ಗೆ ಚೆನ್ನೈನ ಚಂದ್ರಕಾಂತ ಎಂಬುವರು ದೂರು ನೀಡಿದ್ದಾರೆ. ಅವರು ಕುಟುಂಬ ಸದಸ್ಯರ ಜತೆ ಇನ್ಫೆಂಟ್ರಿ ರಸ್ತೆಯ ಭಗವಾನ್ ಮಹಾವೀರ್ ಸಮುದಾಯ ಭವನದಲ್ಲಿ ನಡೆಯುತ್ತಿದ್ದ ಸಂಬಂಧಿಕರ ಮದುವೆ ಸಮಾರಂಭಕ್ಕೆ ಕಾರಿನಲ್ಲಿ ಬಂದಿದ್ದರು. ಅವರು ಕಾರನ್ನು ರಸ್ತೆ ಬದಿ ನಿಲ್ಲಿಸಿ ಕಲ್ಯಾಣ ಮಂಟಪಕ್ಕೆ ಹೋಗಿದ್ದರು. ಈ ಸಂದರ್ಭದಲ್ಲಿ ಕಿಡಿಗೇಡಿಗಳು ಕಾರಿನ ಗಾಜು ಒಡೆದು ಆಭರಣ ಮತ್ತು ಹಣ ಕಳವು ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಮರ್ಷಿಯಲ್‌ಸ್ಟ್ರೀಟ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಾಹಿಮ್  ಬಂಧನ
ಬಿಬಿಎಂಪಿ ಸದಸ್ಯ ದಿವಾನ್ ಅಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿ ಮಾಹಿಮ್ (41) ಹಾಗೂ ಆತನ ಮೂವರು ಸಹಚರರನ್ನು ನಗರ ಪೊಲೀಸರು ಬಂಧಿಸಿದ್ದಾರೆ.

ಸಿದ್ದಾಪುರ ಬಳಿಯ ಸೋಮೇಶ್ವರನಗರದ ಸಲೀಂ ಪಾಷಾ (32), ಬಾಪೂಜಿನಗರದ ಮಹಮ್ಮದ್ ಪಾಷಾ (38) ಮತ್ತು ಬೈರಸಂದ್ರದ ಮಹಮ್ಮದ್ ಜಾವೀೀದ್ (37) ಬಂಧಿತರು. ಪ್ರಕರಣದ ಇತರೆ ಆರೋಪಿಗಳಾದ ನಸ್ರು (32) ಮತ್ತು ಮಹಮ್ಮದ್ ಕಬೀರ್ (35) ಎಂಬುವರು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದ ಅಲಿಯ ಸಹೋದರ ಅಕ್ಬರ್ ಅಲಿ ಖಾನ್ ಮತ್ತು ಖಲೀಂವುಲ್ಲಾ ಖಾನ್ ಎಂಬುವರನ್ನು ಕೊಲೆ ಮಾಡಲು ಈ ಆರೋಪಿಗಳು ಸಂಚು ರೂಪಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದು ಅವರೆಲ್ಲನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಮಾಹಿಮ್ ವಿರುದ್ಧ ಎರಡು ಕೊಲೆ, ಕೊಲೆ ಯತ್ನ, ಅಪಹರಣ ಸೇರಿದಂತೆ 15ಕ್ಕೂ ಹೆಚ್ಚು ಅಪರಾಧ ಪ್ರಕರಣಗಳು ದಾಖಲಾಗಿವೆ. ಅಲ್ಲದೇ ಸಿದ್ದಾಪುರ ಠಾಣೆಯ ರೌಡಿ ಪಟ್ಟಿಯಲ್ಲಿ ಆತನ ಹೆಸರಿದೆ. ಬಂಧಿತರಿಂದ ಕಾರು, ಮಾರಕಾಸ್ತ್ರಗಳು ಹಾಗೂ ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮನೆಯಲ್ಲಿ ಕಳವು
ಮನೆಯ ಕಿಟಕಿಯ ಬಳಿ ಇಟ್ಟಿದ್ದ 60 ಸಾವಿರ ರೂಪಾಯಿ ಮೌಲ್ಯದ ಅಭರಣಗಳನ್ನು ದುಷ್ಕರ್ಮಿಗಳು ದೋಚಿರುವ ಘಟನೆ ಸಂಜಯನಗರದ ಎ.ಇ.ಸಿ.ಎಸ್ ಲೇಔಟ್ ಎರಡನೇ ಹಂತದಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ.

ಈ ಸಂಬಂಧ ಕೆ.ಮಂಜುನಾಥ್ ಎಂಬುವರು ದೂರು ನೀಡಿದ್ದಾರೆ. ಮಂಜುನಾಥ್ ಅವರ ಅಜ್ಜಿ ರಾತ್ರಿ ಮಲಗುವ ಮುನ್ನ ತಮ್ಮ ಆಭರಣಗಳನ್ನು ಕಿಟಕಿ ಬಳಿ ಬಿಚ್ಚಿಟ್ಟಿದ್ದರು. ಕಿಟಕಿಯ ಬಾಗಿಲು ಸಹ ತೆರೆದಿತ್ತು. ಬೆಳಗಿನ ಜಾವ 3.30ರ ಸುಮಾರಿಗೆ ಕಿಡಿಗೇಡಿಗಳು ಮನೆಯ ಬಳಿ ಬಂದು ಆ ಆಭರಣಗಳನ್ನು ಕಳವು ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT