8ರಂದು ಶಿಸ್ತು ಕ್ರಮ ನಿರ್ಧಾರ

7

8ರಂದು ಶಿಸ್ತು ಕ್ರಮ ನಿರ್ಧಾರ

Published:
Updated:

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಗುರುತಿಸಿಕೊಂಡಿರುವ ಬಿಜೆಪಿ ಶಾಸಕರು, ಮುಖಂಡರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ಪಕ್ಷದ ವರಿಷ್ಠರು ಮುಂದಾಗಿದ್ದಾರೆ. ಇದೇ 8ರಂದು ದೆಹಲಿಯಲ್ಲಿ ನಡೆಯುವ ಪಕ್ಷದ ಪ್ರಮುಖರ (ಕೋರ್ ಕಮಿಟಿ) ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಉನ್ನತ ಮೂಲಗಳು ತಿಳಿಸಿವೆ.9ರಂದು ಹಾವೇರಿಯಲ್ಲಿ ನಡೆಯುವ ಕೆಜೆಪಿ ಸಮಾವೇಶದಲ್ಲಿ ಕೆಲವು ಶಾಸಕರು ಭಾಗವಹಿಸುವ ನಿರೀಕ್ಷೆ ಇದೆ. ಶಾಸಕರು ಸಮಾವೇಶದಲ್ಲಿ ಭಾಗವಹಿಸಿದರೆ, ಅವರ ವಿರುದ್ಧ ಕೈಗೊಳ್ಳಬೇಕಾದ ಶಿಸ್ತುಕ್ರಮದ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಬಿಜೆಪಿಯ ಹಿರಿಯ ಮುಖಂಡರೊಬ್ಬರು `ಪ್ರಜಾವಾಣಿ'ಗೆ ತಿಳಿಸಿದರು.ಸಭೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿಗಳಾದ ಅರುಣ್ ಜೇಟ್ಲಿ, ಧರ್ಮೇಂದ್ರ ಪ್ರಧಾನ್ ಭಾಗವಹಿಸುವರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry