ಶುಕ್ರವಾರ, ಮೇ 7, 2021
18 °C

8 ಪ್ರಕರಣ ದಾಖಲು, 14 ಜನರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಉಪಚುನಾವಣೆ ಪ್ರಕ್ರಿಯೆ ಆರಂಭಗೊಂಡಾಗಿನಿಂದ ಸೆ. 19ರ ವರೆಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಒಟ್ಟು 8 ಪ್ರಕರಣಗಳು ದಾಖಲಾಗಿವೆ.ಈ ಪೈಕಿ ಬಿಜೆಪಿ ವಿರುದ್ಧ 3, ಕಾಂಗ್ರೆಸ್ ಹಾಗೂ ಜೆಡಿಎಸ್ ವಿರುದ್ಧ ಕ್ರಮವಾಗಿ 2 ಮತ್ತು 1 ಪ್ರಕರಣ ದಾಖಲಾಗಿವೆ. ಮದ್ಯದ ಅಕ್ರಮ ಸಾಗಾಟಕ್ಕೆ ಸಂಬಂಧಿಸಿದಂತೆ ಉಳಿದೆರಡು ಪ್ರಕರಣಗಳು ದಾಖಲಾಗಿವೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.ಅಕ್ರಮವಾಗಿ ಮದ್ಯ ಸಂಗ್ರಹ, ಮಾರಾಟಕ್ಕೆ ಸಂಬಂಧಿಸಿದಂತೆ ಒಟ್ಟು 16 ದಾಳಿಗಳು ನಡೆದಿದ್ದು, ಈ ಸಂಬಂಧ 14 ಜನರನ್ನು ಬಂಧಿಸಲಾಗಿದೆ. 49 ಲೀ. ನಷ್ಟು ಮದ್ಯ, 10.56 ಲೀ.ನಷ್ಟು ಬೀರ್ ಹಾಗೂ ಒಂದು ಬೈಕ್ ಜಪ್ತಿ ಮಾಡಲಾಗಿದೆ.ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ನಗರ ಠಾಣೆಯಲ್ಲಿ 5 ಹಾಗೂ ಹಿಟ್ನಾಳ್ ವೃತ್ತದಲ್ಲಿ 3 ಪ್ರಕರಣಗಳು ದಾಖಲಾಗಿವೆ.ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳ ಪೈಕಿ ರಾಜಕೀಯ ಪಕ್ಷಗಳಿಂದ ಕಾನೂನು ಬಾಹಿರವಾಗಿ ವಾಹನಗಳ ಬಳಕೆಗೆ ಸಂಬಂಧಿಸಿದಂತೆ 2, ಮದ್ಯ ಹಂಚಿಕೆಗೆ ಸಂಬಂಧಿಸಿದಂತೆ 2 ಹಾಗೂ ಹಣ ಹಂಚಿಕೆಗೆ ಸಂಬಂಧಿಸಿದಂತೆ ಒಂದು ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.