ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

8 ಪ್ರಕರಣ ದಾಖಲು, 14 ಜನರ ಬಂಧನ

Last Updated 21 ಸೆಪ್ಟೆಂಬರ್ 2011, 9:45 IST
ಅಕ್ಷರ ಗಾತ್ರ

ಕೊಪ್ಪಳ: ಉಪಚುನಾವಣೆ ಪ್ರಕ್ರಿಯೆ ಆರಂಭಗೊಂಡಾಗಿನಿಂದ ಸೆ. 19ರ ವರೆಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಒಟ್ಟು 8 ಪ್ರಕರಣಗಳು ದಾಖಲಾಗಿವೆ.

ಈ ಪೈಕಿ ಬಿಜೆಪಿ ವಿರುದ್ಧ 3, ಕಾಂಗ್ರೆಸ್ ಹಾಗೂ ಜೆಡಿಎಸ್ ವಿರುದ್ಧ ಕ್ರಮವಾಗಿ 2 ಮತ್ತು 1 ಪ್ರಕರಣ ದಾಖಲಾಗಿವೆ. ಮದ್ಯದ ಅಕ್ರಮ ಸಾಗಾಟಕ್ಕೆ ಸಂಬಂಧಿಸಿದಂತೆ ಉಳಿದೆರಡು ಪ್ರಕರಣಗಳು ದಾಖಲಾಗಿವೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಅಕ್ರಮವಾಗಿ ಮದ್ಯ ಸಂಗ್ರಹ, ಮಾರಾಟಕ್ಕೆ ಸಂಬಂಧಿಸಿದಂತೆ ಒಟ್ಟು 16 ದಾಳಿಗಳು ನಡೆದಿದ್ದು, ಈ ಸಂಬಂಧ 14 ಜನರನ್ನು ಬಂಧಿಸಲಾಗಿದೆ. 49 ಲೀ. ನಷ್ಟು ಮದ್ಯ, 10.56 ಲೀ.ನಷ್ಟು ಬೀರ್ ಹಾಗೂ ಒಂದು ಬೈಕ್ ಜಪ್ತಿ ಮಾಡಲಾಗಿದೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ನಗರ ಠಾಣೆಯಲ್ಲಿ 5 ಹಾಗೂ ಹಿಟ್ನಾಳ್ ವೃತ್ತದಲ್ಲಿ 3 ಪ್ರಕರಣಗಳು ದಾಖಲಾಗಿವೆ.

ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳ ಪೈಕಿ ರಾಜಕೀಯ ಪಕ್ಷಗಳಿಂದ ಕಾನೂನು ಬಾಹಿರವಾಗಿ ವಾಹನಗಳ ಬಳಕೆಗೆ ಸಂಬಂಧಿಸಿದಂತೆ 2, ಮದ್ಯ ಹಂಚಿಕೆಗೆ ಸಂಬಂಧಿಸಿದಂತೆ 2 ಹಾಗೂ ಹಣ ಹಂಚಿಕೆಗೆ ಸಂಬಂಧಿಸಿದಂತೆ ಒಂದು ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT