ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

8 ಲಕ್ಷ ಮೌಲ್ಯದ ಮರಳು ಜಪ್ತಿ: ಬಂಧನ

Last Updated 13 ಜುಲೈ 2012, 8:10 IST
ಅಕ್ಷರ ಗಾತ್ರ

ಸಿಂದಗಿ: ಇಲ್ಲಿಗೆ ಸಮೀಪದ ಮಲಘಾಣ ಗ್ರಾಮದ ಹೊಲವೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ರೂ. 8ಲಕ್ಷ ಮೌಲ್ಯದ ಮರಳನ್ನು ಜಪ್ತಿ ಮಾಡಿ, ಆರೋಪಿಗಳನ್ನು  ಬುಧವಾರ  ಪೊಲೀಸರು ಬಂಧಿಸಿದ್ದಾರೆ.

ಮುರ್ತೂಜಾ ದಸ್ತಗೀರ ಯಾಳಗಿಯವರ ಹೊಲದಲ್ಲಿ 300 ಲಾರಿಯಷ್ಟು (ಎರಡು ಸಾವಿರ ಘನಮೀಟರ್) ಮರಳನ್ನು ಅಕ್ರಮವಾಗಿ ಸಂಗ್ರಹಿಸಿಡಲಾದ ಖಚಿತ ಮಾಹಿತ ಮೇರೆಗೆ ಇಂಡಿ ಉಪವಿಭಾಗದ ಡಿ.ವೈ.ಎಸ್.ಪಿ ಮುತ್ತುರಾಜ್ ಅವರ ಮಾರ್ಗದರ್ಶನದಲ್ಲಿ ತಹಶೀಲ್ದಾರ ಡಾ. ಶಂಕ್ರಣ್ಣ ವಣಕ್ಯಾಳ, ಸರ್ಕಲ್ ಇನ್ಸ್‌ಪೆಕ್ಟರ್ ಚಿದಂಬರ ವಿ.ಎಂ. ಸಿಂದಗಿ ಠಾಣೆ ಸಬ್ ಇನ್ಸ್‌ಪೆಕ್ಟರ್ ರಮೇಶ ರೊಟ್ಟಿ, ಆಲಮೇಲ ಠಾಣೆ ಸಬ್ ಇನ್ಸ್‌ಪೆಕ್ಟರ್ ಜೆ.ಎಲ್. ಗೌಳಿ, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಆರ್.ಆರ್. ಕತ್ತಿ ತಂಡ ದಾಳಿ ನಡೆಸಿ ಭಾರಿ ಪ್ರಮಾಣದಲ್ಲಿ ಸಂಗ್ರಹಿಸಿಟ್ಟ ಮರಳು, ಎರಡು ಟಿಪ್ಪರ್, ಒಂದು ಜೆಸಿಬಿ ಯಂತ್ರ ಹೀಗೆ ಒಟ್ಟು ರೂ.16 ಲಕ್ಷ ಮೊತ್ತದ ವಸ್ತುಗಳನ್ನು ಜಪ್ತಿ ಮಾಡಿ ಆರೋಪಿ ಮುರ್ತೂಜಾನನ್ನು ಬಂಧಿಸಿದ್ದಾರೆ. ಈ ಕುರಿತು ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT