850 ಜನರ ನೇತ್ರ ತಪಾಸಣೆ

7

850 ಜನರ ನೇತ್ರ ತಪಾಸಣೆ

Published:
Updated:

ಪೀಣ್ಯ ದಾಸರಹಳ್ಳಿ:  ನಗರದ ಕೊಟ್ಟಿಗೆಪಾಳ್ಯ, ಲಗ್ಗೆರೆಯಲ್ಲಿ ಯುವ ಕಾಂಗ್ರೆಸ್‌ನ ರಾಜರಾಜೇಶ್ವರಿನಗರ ಕ್ಷೇತ್ರ ಘಟಕ, ಸೋಲಂಕಿ ಕಣ್ಣಿನ ಆಸ್ಪತ್ರೆಗಳ ಆಶ್ರಯದಲ್ಲಿ ಈಚೆಗೆ ನಡೆದ ಉಚಿತ ಕಣ್ಣಿನ ತಪಾಸಣಾ ಶಿಬಿರದಲ್ಲಿ 850 ಜನರು ನೇತ್ರ ತಪಾಸಣೆ ಮಾಡಿಸಿಕೊಂಡರು."350 ಮಂದಿಗೆ ಕನ್ನಡಕ ವಿತರಿಸಲಾಯಿತು. 84 ಜನರನ್ನು ಶಸ್ತ್ರ ಚಿಕಿತ್ಸೆಗಾಗಿ ಸೋಲಂಕಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಶಿಬಿರದ ಆಯೋಜಕರು ತಿಳಿಸಿದರು.ಪಾಲಿಕೆ ಸದಸ್ಯ ಗೋವಿಂದರಾಜು, ರಾಜರಾಜೇಶ್ವರಿ ನಗರಸಭೆ ಮಾಜಿ ಅಧ್ಯಕ್ಷ ಹನುಮಂತರಾಯಪ್ಪ, ಮುಖಂಡರಾದ ಮೋಹನ್ ಕುಮಾರ್, ನಟರಾಜ್‌ಗೌಡ, ಕೃಷ್ಣ, ಅಮರ್, ಜ್ಯೋತಿ ಇತರರು ಹಾಜರಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry