9ನೇ ಮಹಾ ಕುಂಭಮೇಳ ಇಂದಿನಿಂದ

7

9ನೇ ಮಹಾ ಕುಂಭಮೇಳ ಇಂದಿನಿಂದ

Published:
Updated:
9ನೇ ಮಹಾ ಕುಂಭಮೇಳ ಇಂದಿನಿಂದ

ತಿ.ನರಸೀಪುರ: ತಿರಮಕೂಡಲಿನ ತ್ರಿವೇಣಿ ಸಂಗಮದಲ್ಲಿ ಫೆ.23 ರಿಂದ ಮೂರು ದಿನಗಳ ಕಾಲ ದಕ್ಷಿಣ ಭಾರತದ 9 ನೇ ಮಹಾ ಕುಂಭಮೇಳ ನಡೆಯಲಿದೆ. ಇದರ ಬಂದೋಬಸ್ತ್‌ಗೆ ಜಿಲ್ಲೆಯ ವಿವಿಧ ಭಾಗಗಳಿಂದ ನೂರಾರು ಸಂಖ್ಯೆಯಲ್ಲಿ ಪೊಲೀಸರು ಆಗಮಿಸಿದ್ದಾರೆ.ಕುಂಭಮೇಳಕ್ಕೆ ಪ್ರಚಾರದ ಕೊರತೆ ಎದ್ದು ಕಾಣುತ್ತಿದೆ. ಹೆಚ್ಚು ಪ್ರಚಾರ ಮಾಡಿದ್ದರೆ ಲಕ್ಷಾಂತರ ಮಂದಿ ಸೇರುವ ನಿರೀಕ್ಷೆ ಇಟ್ಟುಕೊಳ್ಳಬಹುದಿತ್ತು. ಆದರೂ ಸಂಗಮದಲ್ಲಿ ಸ್ನಾನಕ್ಕೆ  ಹೆಚ್ಚು ಜನರು ಬರುವ ನಿರೀಕ್ಷೆ ಇದೆ ಎನ್ನುವುದು ಸ್ಥಳೀಯರ ಭಾವನೆ. ಅಧಿಕಾರಿಗಳು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಒತ್ತಡದ ನಡುವೆಯೂ ಕುಂಭಮೇಳದ ಸಿದ್ಧತಾ ಕಾರ್ಯ ಮುಗಿಸಿದ್ದಾರೆ.ಜಿಲ್ಲಾಧಿಕಾರಿ ಭೇಟಿ: ಜಿಲ್ಲಾಧಿಕಾರಿ ಡಾ.ರಾಮೇಗೌಡ ಅವರು ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಸೋಮನಾಥಾನಂದ ಸ್ವಾಮೀಜಿ ಹಾಗೂ ಅಧಿಕಾರಿಗಳೊಂದಿಗೆ ಸಂಗಮಕ್ಕೆ ಶುಕ್ರವಾರ ಭೇಟಿ ನೀಡಿ ಅಂತಿಮ ಸಿದ್ಧತೆಗಳನ್ನು ಪರಿಶೀಲಿಸಿದರು. ಮುಖ್ಯಮಂತ್ರಿ ಅಥವಾ ಇನ್ನಿತರರು ಗಣ್ಯರು ಕುಂಭ ಸ್ನಾನ ಮಾಡುವುದಾದರೆ ಸೂಕ್ತ ಸ್ಥಳವನ್ನು ಗುರುತಿಸುವುದು ಸೇರಿದಂತೆ ವಿವಿಧ ಸಿದ್ಧತೆಗಳನ್ನು ವೀಕ್ಷಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry