ಶುಕ್ರವಾರ, ಮೇ 7, 2021
20 °C

`9 ಸಾವಿರ ಪಡಿತರ ಚೀಟಿ ರದ್ದು'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಳಬಾಗಲು: ತಾಲ್ಲೂಕಿನಲ್ಲಿ ಮಳೆಯ ಪ್ರಮಾಣ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಆದರೆ ಸರ್ಕಾರವು ಬಡವರ ಆಹಾರ ಕಿತ್ತುಕೊಳ್ಳಲು ಹವಣಿಸುತ್ತಿದೆ. ಈಗಾಗಲೇ ಪಡಿತರ ಚೀಟಿ ರದ್ದುಪಡಿಸಿರುವುದೇ ಅವ್ಯವಸ್ಥೆಗೆ ನಿದರ್ಶನ ಎಂದು ಆಕ್ರೋಶ ವ್ಯಕ್ತಪಡಿಸಿ ತಾಲ್ಲೂಕು ರೈತಸಂಘ ಮತ್ತು ಹಸಿರುಸೇನೆ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.ಮಿನಿವಿಧಾನಸೌಧ ಸಮೀಪ ಜಮಾಯಿಸಿದ ಸಂಘ, ಸೇನೆಯ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಪ್ರಮುಖರು ತಾಲ್ಲೂಕಿನಲ್ಲಿ ಒಂಬತ್ತು ಸಾವಿರ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ. ಇದರಿಂದ ಜನಸಾಮಾನ್ಯರಿಗೆ, ರೈತರಿಗೆ ತೊಂದರೆಯಾಗಿದೆ ಎಂದು ದೂರಿದರು.ಆಹಾರ ಇಲಾಖೆಯು ಮೇಲಿಂದ ಮೇಲೆ ಬದಲಾಯಿಸುತ್ತಿರುವ ಕೆಲವು ನಿಯಮಗಳು ಅನಕ್ಷರಸ್ಥರಿಗೆ ತಿಳಿಯುವುದಿಲ್ಲ. ಕೆಲ ಮಧ್ಯವರ್ತಿಗಳು ಇದನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಕೂಡಲೇ ಇರುವ ಗೊಂದಲಗಳನ್ನು ನಿವಾರಿಸುವಂತೆ ಒತ್ತಾಯಿಸಿ ತಹಶೀಲ್ದಾರ್ ಡಿ.ವಿ.ರಾಮಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.  ಸಂಘದ ಅಧ್ಯಕ್ಷರಾದ ಆರ್.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಎನ್.ಹರೀಶ್, ಕಾರ್ಯಾಧ್ಯಕ್ಷ ಬಡಗಿ ರಮೇಶ್, ಸದಾಶಿವ,ಸುರೇಶ್, ಪಿ.ಗೋವಿಂದಪ್ಪ ಮುಂತಾದವರು ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.