ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

9/11 ದಾಳಿ ಪ್ರಕರಣ ಸಂತ್ರಸ್ತರಿಗೆ ಅಮೆರಿಕ ಕೋರ್ಟ್ ಪರಿಹಾರ

Last Updated 4 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ನ್ಯೂಯಾರ್ಕ್ (ಎಎಫ್‌ಪಿ): ಅಮೆರಿಕದಲ್ಲಿ 2001ರ ಸೆಪ್ಟೆಂಬರ್ 11ರಂದು ನಡೆದ ದಾಳಿಯಿಂದ ಸಂತ್ರಸ್ತರಾದವರಿಗೆ ಆರು ನೂರು ಕೋಟಿ ಡಾಲರ್ ಪರಿಹಾರ ನೀಡುವಂತೆ ಇಲ್ಲಿನ ಜಿಲ್ಲಾ ನ್ಯಾಯಾಲಯವು ಇರಾನ್, ಅಲ್ ಖೈದಾ ಮತ್ತಿತರ ಆರೋಪಿಗಳಿಗೆ ಆದೇಶಿಸಿದೆ.

ದಾಳಿಯಿಂದ ಉಂಟಾದ ಆರ್ಥಿಕ ನಷ್ಟ, ನಾಗರಿಕರ ಹಾನಿಗೆ  600 ಕೋಟಿ  ಡಾಲರ್ ಮೊತ್ತವನ್ನು ಕೋರ್ಟ್ ದಂಡನೆಯಾಗಿ ವಿಧಿಸಿದ್ದು, ಈ ಬೃಹತ್ ಮೊತ್ತವನ್ನು ಸಂತ್ರಸ್ತರಿಗೆ ಪರಿಹಾರ ರೂಪದಲ್ಲಿ ನೀಡಲು ಸೂಚಿಸಿದೆ. ಆದರೆ, ಈ ಪರಿಹಾರ ಮೊತ್ತ ಸಂಗ್ರಹದ ಸಾಧ್ಯತೆ ಬಗ್ಗೆಯೇ ಅನುಮಾನ ವ್ಯಕ್ತವಾಗಿದೆ.

 9/11 ದಾಳಿಗೆ ಬಲಿಯಾದವರಲ್ಲಿ 47 ಜನರ ಕುಟುಂಬಗಳು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯೂಯಾರ್ಕ್‌ನ ಜಿಲ್ಲಾ ನ್ಯಾಯಾಲಯವು ಬುಧವಾರ ಈ ಆದೇಶ ನೀಡಿದೆ. ನ್ಯೂಯಾರ್ಕ್‌ನ ವಿಶ್ವ ವಾಣಿಜ್ಯ ಕೇಂದ್ರದ ಕಟ್ಟಡ ಮತ್ತು ವಾಷಿಂಗ್ಟನ್ ಡಿಸಿಯಲ್ಲಿನ ಪೆಂಟಗಾನ್ ಕಟ್ಟಡಗಳ ಮೇಲೆ  ಉಗ್ರರು ನಡೆಸಿದ ವೈಮಾನಿಕ ದಾಳಿಯಲ್ಲಿ ಮೂರು ಸಾವಿರ ಮಂದಿ ಸಾವನ್ನಪ್ಪಿದ್ದಾರೆಂದು ಅಂದಾಜಿಸಲಾಗಿದೆ.

ಈ ದಾಳಿಗೂ ತನಗೂ ಯಾವುದೇ ಸಂಬಂಧ ಇಲ್ಲ ಎಂದು ಇರಾನ್ ಪ್ರತಿಪಾದಿಸುತ್ತಲೇ ಬಂದಿದ್ದರೂ, ಆ ರಾಷ್ಟ್ರದ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT