ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

9ನೇ ತರಗತಿಯಿಂದ ವೃತ್ತಿಶಿಕ್ಷಣ ಮುಂದಿನ ವರ್ಷ ಜಾರಿ: ಕಾಗೇರಿ

Last Updated 1 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ವೃತ್ತಿಪರ ಕೌಶಲಗಳನ್ನು ಕಲಿಯುವ ಅವಕಾಶ ದೊರೆಯಲಿದೆ. ಸಾಮಾನ್ಯ ಶಿಕ್ಷಣದಲ್ಲಿ ವೃತ್ತಿಶಿಕ್ಷಣ ಅಳವಡಿಸುವ ಸಂಬಂಧ ಕೇಂದ್ರ ಸರ್ಕಾರ ಅನುಷ್ಠಾನಕ್ಕೆ ತರಲು ಉದ್ದೇಶಿಸಿರುವ ಯೋಜನೆಯ ಅಂಗವಾಗಿ ಇದು ಜಾರಿಯಾಗಲಿದೆ.

ರಾಜ್ಯದಲ್ಲಿ ಈ ಯೋಜನೆಯ ಅನುಷ್ಠಾನದ ಕುರಿತು ರಾಷ್ಟ್ರೀಯ ವೃತ್ತಿ ಶಿಕ್ಷಣ ಅರ್ಹತಾ ಚೌಕಟ್ಟು ರಾಜ್ಯ ಸಮಿತಿ ಶನಿವಾರ ಇಲ್ಲಿ ನಡೆಸಿದ ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಇದನ್ನು ತಿಳಿಸಿದರು.

ಈ ಪದ್ಧತಿ ಜಾರಿಗೆ ಬಂದ ನಂತರ ಸಾಂಪ್ರದಾಯಿಕ ಶಿಕ್ಷಣದ ಜೊತೆಗೇ ವೃತ್ತಿಪರ ಕೌಶಲಗಳನ್ನು ವಿದ್ಯಾರ್ಥಿಗಳು ಕಲಿಯಬಹುದು. ಯೋಜನೆ ರೂಪುರೇಷೆ ಕುರಿತು ವಿಸ್ತೃತ ಚರ್ಚೆ ಆಗಬೇಕಿದೆ. ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅವರೂ ಈ ಯೋಜನೆ ಅನುಷ್ಠಾನಕ್ಕೆ ತರುವಂತೆ ಮಾಡಲಾಗುವುದು ಎಂದು ಅವರು ಹೇಳಿದರು.

ಭೋಪಾಲ್‌ನ ಸುಂದರಲಾಲ್ ಶರ್ಮಾ ಕೇಂದ್ರೀಯ ವೃತ್ತಿ ತರಬೇತಿ ಸಂಸ್ಥೆಯ ಜಂಟಿ ನಿರ್ದೇಶಕ ಪ್ರೊ.ಆರ್.ಬಿ. ಶಿವಗುಂಡ, `ಪ್ರಪಂಚದ 60ಕ್ಕೂ ಹೆಚ್ಚು ದೇಶಗಳು ಈ ಯೋಜನೆ ಜಾರಿಗೆ ತರುವತ್ತ ಹೆಜ್ಜೆ ಇಟ್ಟಿವೆ~ ಎಂದು ತಿಳಿಸಿದರು.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಕಾರ್ಯದರ್ಶಿ ಜಿ. ಕುಮಾರ ನಾಯಕ್, ರಾಷ್ಟ್ರೀಯ ವೃತ್ತಿ ಶಿಕ್ಷಣ ಅರ್ಹತಾ ಚೌಕಟ್ಟು ರಾಜ್ಯ ಸಮಿತಿಯ ಅಧ್ಯಕ್ಷರಾದ ವಿಷ್ಣುಕಾಂತ ಚಟಪಲ್ಲಿ ಮತ್ತಿತರರು ಈ ಸಭೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT