ಶನಿವಾರ, ಫೆಬ್ರವರಿ 27, 2021
28 °C

ಹೃದಯ ಗೆದ್ದ ಸಿಂಧು: ಅಭಿನಂದನೆಗಳ ಸುರಿಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೃದಯ ಗೆದ್ದ ಸಿಂಧು: ಅಭಿನಂದನೆಗಳ ಸುರಿಮಳೆ

ಬೆಂಗಳೂರು: ಒಲಿಂಪಿಕ್ಸ್‌ ಬ್ಯಾಡ್ಮಿಂಟನ್‌ ಸೆಮಿಫೈನಲ್‌ನಲ್ಲಿ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ಫೈನಲ್‌ ಪ್ರವೇಶಿಸಿರುವ ಪಿ.ವಿ.ಸಿಂಧುಗೆ ರಾಷ್ಟ್ರಪತಿ, ಪ್ರಧಾನಿ ಅವರು ಅಭಿನಂದಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.‘ಅತ್ಯುತ್ತಮ ಪ್ರದರ್ಶನ ನೀಡಿದ ಸಿಂಧು ದೇಶವೇ ಹೆಮ್ಮೆ ಪಡುವಂತೆ ಮಾಡಿದ್ದಾರೆ’ ಎಂದು ಟ್ವೀಟ್ ಮಾಡಿರುವ ನರೇಂದ್ರ ಮೋದಿ ಫೈನಲ್ ಪಂದ್ಯಕ್ಕೆ ಶುಭ ಕೋರಿದ್ದಾರೆ.


‘ಸಿಂಧುಗೆ ಹೃದಯಪೂರ್ವಕ ಅಭಿನಂದನೆಗಳು’  ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಟ್ವೀಟ್‌ ಮಾಡಿದ್ದು, ಫೈನಲ್‌ಗೆ ಶುಭ ಹಾರೈಸಿದ್ದಾರೆ.

ಅಮೋಘ ಆಟದ ಮೂಲಕ ಫೈನಲ್ ಪ್ರವೇಶಿಸಿರುವ ಸಿಂಧುಗೆ ಅಭಿನಂದನೆಗಳು ಎಂದು ಒಲಿಂಪಿಕ್ಸ್‌ನಲ್ಲಿ ಭಾರತ ತಂಡದ ರಾಯಭಾರಿಯೂ ಆಗಿರುವ ಸಚಿನ್ ತೆಂಡೂಲ್ಕರ್ ಟ್ವೀಟ್ ಮಾಡಿದ್ದಾರೆ.
 

‘ಎಲ್ಲರ ಹೃದಯ ಗೆದ್ದ ಸಿಂಧು’ಎಂದು ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್‌ ಟ್ವೀಟ್‌ ಮೂಲಕ ಅಭಿನಂಧಿಸಿದ್ದಾರೆ.

 

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.