ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅ.22ರವರೆಗೆ ಯಡಿಯೂರಪ್ಪ ನ್ಯಾಯಾಂಗ ಬಂಧನ, ಕೈದಿ ನಂ 9118

Last Updated 15 ಅಕ್ಟೋಬರ್ 2011, 11:15 IST
ಅಕ್ಷರ ಗಾತ್ರ

ಬೆಂಗಳೂರು (ಪಿಟಿಐ): ಸರ್ಕಾರಿ ಭೂಮಿ ಡಿ ನೋಟಿಫಿಕೇಷನ್ ಹಗರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯವು ಶನಿವಾರ ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆಯೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಅವರಿಗೆ ನಿರೀಕ್ಷಣಾ ಜಾಮೀನು ನೀರಾಕರಿಸಿ ಅವರ ಬಂಧನಕ್ಕೆ ಆದೇಶಿಸಿತು.

ನ್ಯಾಯಲಯಕ್ಕೆ ಹಾಜರಿದ್ದ ಕೃಷ್ಣಯ್ಯ ಶೆಟ್ಟಿ ಅವರನ್ನು ತಕ್ಷಣ ಲೋಕಾಯುಕ್ತ ಪೊಲೀಸರು ಬಂಧಿಸಿದರು. ಅನಾರೋಗ್ಯದ ಕಾರಣ ನೀಡಿ ನ್ಯಾಯಾಲಯದ ಕಲಾಪದಿಂದ ಯಡಿಯೂರಪ್ಪ ಅವರು ದೂರ ಉಳಿದಿದ್ದರು. ಬಂಧನದ ವಾರೆಂಟ್ ಜಾರಿಯಾಗುತ್ತಿದ್ದಂತೆ ಲೋಕಾಯಕ್ತ ಪೋಲಿಸರು ಬಿ.ಎಸ್. ಯಡಿಯೂರಪ್ಪ ಅವರ ರೇಸ್ ಕೋರ್ಸ್ ನಿವಾಸಕ್ಕೆ ಬಂಧನದ ವಾರೆಂಟ್ ಹಿಡಿದು ಧಾವಿಸಿದರು.ಆದರೆ, ಅವರು ಆ ನಿವಾಸದಲ್ಲಿ ಇರಲಿಲ್ಲ.

ಲೋಕಾಯುಕ್ತ ಪೊಲೀಸರು ಒಂದು ಕಡೆ ಅವರ ಬಂಧನಕ್ಕಾಗಿ ಶೋಧ ಕಾರ್ಯವನ್ನು ನಡೆಸುತ್ತಿದ್ದರೆ, ಇನ್ನೊಂದು ಕಡೆ ಯಡಿಯೂರಪ್ಪ ಅವರು ಸಂಜೆಯ ಹೊತ್ತಿಗೆ ಲೋಕಾಯುಕ್ತ ನ್ಯಾಯಾಲಯಕ್ಕೆ ಬಂದು ಶರಣಾದರು.

ಶರಣಾದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ನ್ಯಾಯಾಲಯವು ಅಕ್ಟೋಬರ್ 22ರ ವರೆಗೆ ನ್ಯಾಯಾಂಗದ ಬಂಧನಕ್ಕೆ ಒಪ್ಪಿಸಿದೆ.

ಪರಪ್ಪನ ಅಗ್ರಹಾರದಲ್ಲಿ ಯಡಿಯೂರಪ್ಪ ಅವರಿಗೆ ವಿಶೇಷ ಕೊಠಡಿಯನ್ನು ನೀಡಿದ್ದು. ಅವರಿಗೆ ಜೈಲು ಅಧಿಕಾರಿಗಳು  9118 ಕೈದಿ ನಂ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT