ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗನವಾಡಿ ಕಾರ್ಯಕರ್ತೆ ವರ್ಗಾವಣೆ ವಿವಾದ

Last Updated 19 ಜುಲೈ 2012, 5:20 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಅಂಗನವಾಡಿ ಕಾರ್ಯಕರ್ತೆಯೊಬ್ಬರ ವರ್ಗಾವಣೆ ವಿಚಾರವಾಗಿ ಗುಂಪೊಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಮದ್ದಾನಸ್ವಾಮಿ ಅವರ ಮೇಲೆ ಹಲ್ಲೆ ನಡೆಸಿರುವ ಘಟನೆ ಬುಧವಾರ ಜರುಗಿದೆ.

ಭೋಗಯ್ಯನಹುಂಡಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಮಮತಾ ವರ್ಗಾವಣೆ ವಿಚಾರವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಮದ್ದಾನಸ್ವಾಮಿ ಅವರ ಜೀಪನ್ನು ತಡೆದ ಗುಂಪು ಮೇಲೆ ಹಲ್ಲೆ ನಡೆಸಿದೆ.

`ಈ ಗುಂಪಿನಲ್ಲಿ ತಾಲ್ಲೂಕು ಬಿಜೆಪಿ ಅಧ್ಯಕ್ಷ ಸಿ.ಎಸ್.ನಿರಂಜನಕುಮಾರ್, ಮಲ್ಲಿದಾಸ್, ನಟರಾಜ್, ಅಜಯ್, ಗಿರೀಶ್, ಪಾಪಣ್ಣ, ನಟೇಶ್, ಮಂಜು, ಶಿವನಾಗಪ್ಪ ಅವರುಗಳಿದ್ದು ಎಲ್ಲರೂ ಸೇರಿ ಹಲ್ಲೆ ನಡೆಸಿದ್ದಾರೆ~ ಎಂದು ಮದ್ದಾನಸ್ವಾಮಿ ಪೋಲಿಸರಿಗೆ ದೂರು ನೀಡಿದ್ದಾರೆ.

ಗ್ರಾಮದಲ್ಲಿ ಈ ಅಂಗನವಾಡಿ ಕಾರ್ಯಕರ್ತೆಯ ವಿರುದ್ಧ ಅನೇಕ ದೂರುಗಳು ಬಂದಿವೆ, ಗ್ರಾಮದವರೇ ಈಕೆಯನ್ನು ಬೇಡ ಎನ್ನುತ್ತಿದ್ದಾರೆ ಆದ ಕಾರಣ ನಾನು ಈಕೆಗೆ ಕಳೆದ ಒಂದು ತಿಂಗಳಿನಿಂದ ಕರ್ತವ್ಯ ನೀಡಿಲ್ಲ ಎಂದು ಮದ್ದಾನಸ್ವಾಮಿ ತಿಳಿಸಿದ್ದಾರೆ.

`ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಮದ್ದಾನಸ್ವಾಮಿ ನನ್ನ ಮೇಲೆ ಜಾತಿ ನಿಂದನೆ ಮಾಡಿದ್ದಾರೆಂದು~ ತಾಲ್ಲೂಕು ಪಂಚಾಯಿತಿ ಸದಸ್ಯ ಮಲ್ಲಿದಾಸ್ ದೂರಿದ್ದು, ಗುಂಡ್ಲುಪೇಟೆ ಪೋಲಿಸರಿಗೆ ದೂರು ನೀಡಿದ್ದಾರೆ.

`ಜಾತಿ ನಿಂದನೆಯ ಜೊತೆಗೆ ನನ್ನ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದರು ಹಾಗೂ ಮಮತಾ ವರ್ಗಾವಣೆ ವಿಚಾರವಾಗಿ ಮಾತನಾಡಲು ಹೋದಾಗ ಬೇಜವಾಬ್ದಾರಿತನದಿಂದ ನಡೆದು ಕೊಂಡಿದ್ದಾರೆ~ ಎಂದು ದೂರಿನಲ್ಲಿ ತಿಳಿಸಿದ್ದಾರೆ.

`ಮಮತಾಳಿಗೆ ಕಳೆದ ಒಂದು ತಿಂಗಳಿನಿಂದ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ~ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT