ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗವಿಕಲ ಚಿಣ್ಣರ ಹಬ್ಬ

Last Updated 27 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಆಯೋಜಿಸಿರುವ ಅಂಗವಿಕಲ ಮಕ್ಕಳ ರಾಜ್ಯಮಟ್ಟದ ಸಾಂಸ್ಕೃತಿಕ ಹಬ್ಬ ಗುರುವಾರ ಇಲ್ಲಿನ ಸಿದ್ಧಾರೂಢಮಠದ ಆವರಣದಲ್ಲಿ ಆರಂಭವಾಯಿತು.

ಸಮಾರಂಭಕ್ಕೆ ಚಾಲನೆ ನೀಡಿದ ಸಂಸದ ಪ್ರಹ್ಲಾದ ಜೋಶಿ, ಬಡತನದ ಕಾರಣಕ್ಕೆ ಗರ್ಭಿಣಿಯರು ಅಪೌಷ್ಟಿಕತೆಯಿಂದ ಬಳಲುವುದನ್ನು ತಡೆಗಟ್ಟಲು ದೀರ್ಘಾವಧಿಯ ಕಾರ್ಯಕ್ರಮ ಹಾಕಿಕೊಳ್ಳಲು ಸರ್ಕಾರದ ಮಟ್ಟದಲ್ಲಿ ಗಂಭೀರ ಚಿಂತನೆ ಅಗತ್ಯವಿದೆ ಎಂದು ಹೇಳಿದರು. ಹಿರಿಯ ಸಂಶೋಧಕ ಪ್ರೊ.ಎಂ.ಎಂ.ಕಲಬುರ್ಗಿ ಮಾತನಾಡಿ, 12ನೇ ಶತಮಾನದಲ್ಲಿಯೇ ಬಸವಣ್ಣನವರು ತಮ್ಮ ವಚನದಲ್ಲಿ  `ಮಡಿಕೆ ಮುಕ್ಕಾಗಿದೆ ಎಂಬ ಕಾರಣಕ್ಕೆ ಅದರೊಳಗಿನ ಹಾಲಿನ ಸವಿ ಹಾಗೂ ತುಪ್ಪದ ಘಮಲು ಕಮ್ಮಿಯಾಗುವುದಿಲ್ಲ' ಎಂದು ಹೇಳಿದರು.

ಸನ್ಮಾನ: ಟಿ-20 ವಿಶ್ವಕಪ್‌ನಲ್ಲಿ ಚಾಂಪಿಯನ್ ಆದ ಭಾರತ ಅಂಧರ ಕ್ರಿಕೆಟ್ ತಂಡದ ನಾಯಕ ಶೇಖರ ನಾಯ್ಕ, ಆಟಗಾರರಾದ ಎಸ್.ರವಿ, ಪ್ರಕಾಶ ಜೆ. ರಾಮಯ್ಯ ಅವರನ್ನು ಸನ್ಮಾನಿಸಲಾಯಿತು.ಮೂರು ದಿನಗಳ ಕಾಲ ನಡೆಯಲಿರುವ ಸಾಂಸ್ಕೃತಿಕ ಹಬ್ಬದಲ್ಲಿ ರಾಜ್ಯದ 18 ಜಿಲ್ಲೆಗಳ 40 ಶಾಲೆಗಳಿಗೆ ಸೇರಿದ ಎರಡು ಸಾವಿರಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡಿದ್ದಾರೆ. ಎಲ್ಲಾ ಮಕ್ಕಳಿಗೆ ಸಿದ್ಧಾರೂಢಮಠದಲ್ಲಿ ಊಟ, ವಸತಿಯ ವ್ಯವಸ್ಥೆ ಕಲ್ಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT