ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗವಿಕಲರ ಕಲ್ಯಾಣ: ವರದಿ ನೀಡಲು ಸೂಚನೆ

Last Updated 14 ಫೆಬ್ರುವರಿ 2012, 10:25 IST
ಅಕ್ಷರ ಗಾತ್ರ

ಮೈಸೂರು: ಅಂಗವಿಕಲರ ಅಭಿವೃದ್ಧಿ ಗಾಗಿ ಇಲಾಖೆ ಅನುದಾನದಲ್ಲಿ ಮೀಸಲಿ ಟ್ಟಿರುವ ಹಣದಲ್ಲಿ ತಿಂಗಳುವಾರು ಸಾಧಿಸಿರುವ ಆರ್ಥಿಕ ಮತ್ತು ಭೌತಿಕ ಪ್ರಗತಿ ವರದಿಯನ್ನು ಜಿಲ್ಲಾ ಅಂಗವಿಕ ಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ನಿಗದಿತ ಅವಧಿಯೊಳಗೆ ಕಳುಹಿಸುವಂತೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜೆ. ಸುನೀತಾ ವೀರಪ್ಪಗೌಡ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣ ದಲ್ಲಿ ಸೋಮವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಂಗವಿಕಲರ ಅಭಿವೃದ್ಧಿಗಾಗಿ 15 ಲಕ್ಷ ರೂ.ಗಳ ಅನುದಾನ ಇದ್ದು, ಮಾರ್ಚ್ ಬಂದರೂ ಗುರಿ ಸಾಧಿಸಿಲ್ಲ. ಮಾರ್ಚ್ ಒಳಗೆ ಅವರಿಗೆ ಮೀಸಲಿಟ್ಟಿ ರುವ ಹಣವನ್ನು ಅವರ ಅಭಿವೃದ್ಧಿಗೆ ಬಳಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಪ್ರತಿ ಗ್ರಾಮ ಪಂಚಾಯತ್‌ಗಳಲ್ಲೂ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಂಗ ವಿಕಲರನ್ನು ಗುರುತಿಸಿ ಅವರಿಗೆ ಸರ್ಕಾರದಿಂದ ದೊರೆ ಯುವ ಸವ ಲತ್ತು ವಿತರಿಸುವ ಕಾರ್ಯ ಆಗಬೇಕು ಎಂದರು.

ವಸತಿ ಯೋಜನೆ ಯಡಿ ಸರ್ಕಾರ ಬಡ ವರಿಗೆ ಮನೆ ಕಟ್ಟಿಕೊಳ್ಳಲು ಹಣ ನೀಡುತ್ತಿದ್ದು, ಫಲಾನು ಭವಿಗಳು ಸರ್ಕಾರ ನೀಡುವ ಹಣದ ಜೊತೆಗೆ ತಮ್ಮ ಹಣವನ್ನು ಖರ್ಚು ಮಾಡಿ ಮನೆ ನಿರ್ಮಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿ ಕಾರಿಗಳು ಆಕ್ಷೇಪ ವ್ಯಕ್ತಪಡಿಸಿ ಮನೆ ಕಟ್ಟಲು ಅಡ್ಡಿಪಡಿಸುತ್ತಿದ್ದಾರೆ. ಬಡ ವರು ಉತ್ತಮ ಮನೆ ಕಟ್ಟಿಕೊಳ್ಳುವುದು ತಪ್ಪಾ, ತಾಲ್ಲೂಕುಗಳ ಕಾರ್ಯನಿರ್ವಾ ಹಕ ಅಧಿಕಾರಿಗಳು ಪಿ.ಡಿ.ಓ.ಗಳಿಗೆ ತಿಳಿಸಿ ಮನೆ ನಿರ್ಮಾಣಕ್ಕೆ ಅಡ್ಡಿಪಡಿಸದಂತೆ ತಿಳಿಸಿ ಎಂದರು.

ಕೆಲವು ಶಾಲೆಗಳಲ್ಲಿ ಮಕ್ಕಳು ಪೀಠೋಪಕರಣಗಳಿಲ್ಲದೆ ನೆಲದ ಮೇಲೆ ಕುಳಿತುಕೊಳ್ಳುತ್ತಿದ್ದಾರೆ. ಮಳೆ, ಚಳಿ ಗಾಲದಲ್ಲಿ ಇದು ಮಕ್ಕಳ ಆರೋಗ್ಯ ಕೆಡಲು ಕಾರಣ ವಾಗುತ್ತದೆ. ಶಾಲೆಗಳಿಗೆ ಭೇಟಿ ನೀಡಿದಾಗ ಇಂತಹ ಅವ್ಯವಸ್ಥೆ ನೋಡಿ ಮನಸ್ಸಿಗೆ ತುಂಬಾ ನೋವಾ ಗುತ್ತದೆ. ಇದಕ್ಕಾಗಿ ಎರಡು ಮುಕ್ಕಾಲು ಕೋಟಿ ಹಣ ಮೀಸಲಿಡಲಾಗಿದೆ. ಉತ್ತಮ ಗುಣಮಟ್ಟದ ಪೀಠೋಪ ಕರಣ ಖರೀದಿಸಿ ವಿತರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು.

ಹೊಸದಾಗಿ ಪಡಿತರ ಚೀಟಿ ಪಡೆಯಲು ಗ್ರಾ.ಪಂ. ಮೂಲಕ ಅರ್ಜಿ ಪಡೆಯ ಲಾಗುತ್ತಿದೆ. ಕೊನೆಯ ದಿನಾಂಕ ನಿಗದಿಪಡಿಸಿಲ್ಲ. ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವವರು ಗ್ರಾಮ ಪಂಚಾಯಿತಿ ಗಳಲ್ಲಿ ಅರ್ಜಿ ಸಲ್ಲಿಸಬಹುದು. ನಂತರ ಅರ್ಜಿಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶ ಕರು ಸಭೆಗೆ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ 2011ನೇ ಡಿಸೆಂಬರ್‌ವರೆಗೆ 882.3 ಮಿ.ಮೀ. ಮಳೆ ಯಾಗಿದೆ. ಕಳೆದ ವರ್ಷ ಇದೇ ಅವಧಿಗೆ 1050.0 ಮಿ.ಮೀ. ಮಳೆಯಾಗಿತ್ತು. ಒಟ್ಟಾರೆ ಎಲ್ಲಾ ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ.
2011-12ನೇ ಸಾಲಿನ ಮುಂಗಾರಿನಲ್ಲಿ ಒಟ್ಟಾರೆ 4,41,050 ಪ್ರದೇಶದಲ್ಲಿ ವಿವಿಧ ಬೆಳೆಗಳನ್ನು ಬೆಳೆಯುವ ಗುರಿ ಹೊಂದಲಾಗಿತ್ತು. 4,11,985 ಹೆಕ್ಟೇರ್ ಪ್ರದೇಶದಲ್ಲಿ ಶೇ. 93 ಬಿತ್ತನೆಯಾಗಿರುತ್ತದೆ.
 
ಬೇಸಿಗೆ ಹಂಗಾಮಿನಲ್ಲಿ ಒಟ್ಟಾರೆ 21,645 ಹೆಕ್ಟೇರ್ ನೀರಾವರಿ ಪ್ರದೇಶದಲ್ಲಿ ವಿವಿಧ ಬೆಳೆಗಳನ್ನು ಬೆಳೆಯುವ ಗುರಿ ಹೊಂದಲಾಗಿತ್ತು. ಈವರೆಗೆ 44 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ ಎಂದು ಕೃಷಿ ಇಲಾಖೆ ಜಂಟಿನಿರ್ದೇ ಶಕರು ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಡಾ: ಶಿವರಾಂ, ಶಿಕ್ಷಣ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿದ್ದವೀರಪ್ಪ, ಚಂದ್ರೇಶ್, ಜಿಲ್ಲಾ ಪಂಚಾಯಿತಿ ಕಾರ್ಯದರ್ಶಿ ಗೋಪಾಲ್, ಯೋಜನಾಧಿಕಾರಿ ವಸುಂಧರಾದೇವಿ ಹಾಗೂ ವಿವಿಧ  ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT