ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗವಿಕಲರ ಪ್ರತಿಭಟನೆ

Last Updated 18 ಜನವರಿ 2011, 8:55 IST
ಅಕ್ಷರ ಗಾತ್ರ

ಧಾರವಾಡ: ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ವಿವಿಧೋದ್ದೇಶ ಮತ್ತು ಗ್ರಾಮೀಣ ಪುನರ್‌ವಸತಿ ಕಾರ್ಯಕರ್ತರ ರಾಜ್ಯ ಒಕ್ಕೂಟದ ಪದಾಧಿಕಾರಿ ಗಳು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.

ಪುನರ್ವಸತಿ ಯೋಜನೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಂಆರ್‌ಡಬ್ಲು (ಕರ್ನಾಟಕ ರಾಜ್ಯ ಅಂಗವಿಕಲರ ಮತ್ತು ವಿವಿಧೋದ್ದೇಶ) ಮತ್ತು ವಿಆರ್‌ಡಬ್ಲು (ಗ್ರಾಮೀಣ ಪುನರ್ವಸತಿ) ಕಾರ್ಯಕರ್ತರಿಗೆ ಕನಿಷ್ಠ ವೇತನ, ಸೇವಾ ಭದ್ರತೆ, ಆರೋಗ್ಯ ವಿಮೆ ಹಾಗೂ ಭವಿಷ್ಯನಿಧಿಯನ್ನು ಒದಗಿಸಬೇಕು, ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆಯನ್ನು ನಗರ ಹಾಗೂ ಪಟ್ಟಣ ಪಂಚಾಯಿತಿಗೆ ವಿಸ್ತರಿಸಿ ಸಮಗ್ರ ಅಂಗವಿಕಲರ ಪುನರ್ವಸತಿ ಯೋಜನೆಯನ್ನು ಯೋಜನೇತರ ಕಾರ್ಯಕ್ರಮವಾಗಿ ರೂಪಿಸಬೇಕು, ಅಂಗವಿಕಲರ ಅಭಿವೃದ್ಧಿಗಾಗಿ ಪ್ರತ್ಯೇಕ ಸಚಿವಾಲಯ ರಚಿಸಬೇಕು, ಕಾರ್ಯಕರ್ತರು ಸೇವೆಯಲ್ಲಿದ್ದಾಗ ಆಕಸ್ಮಿಕವಾಗಿ ಅಪಘಾತಗಳಿಗೆ ಒಳಗಾದರೆ ಅವರ ಕುಟುಂಬದ ನಿರ್ವಹಣೆಗಾಗಿ ಪರಿಹಾರಧನವನ್ನು ಒದಗಿಸಬೇಕು, ರಾಜಕೀಯ ಕ್ಷೇತ್ರದಲ್ಲಿ ಅಂಗವಿಕಲರಿಗೆ ಶೇ. 5ರಷ್ಟು ಮೀಸಲಾತಿ ಒದಗಿಸಬೇಕು ಹಾಗೂ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಅಂಗವಿಕಲರ ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸಿ ಅವುಗಳ ಬಲವರ್ಧನೆ ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಹೊಸ ವೇತನಕ್ಕೆ ಆಗ್ರಹಿಸಿ ಪತ್ರ ಚಳವಳಿ
ಧಾರವಾಡ:
ಶೇ. 50ರಷ್ಟು ತುಟ್ಟಿಭತ್ಯೆಯನ್ನು ಮೂಲ ವೇತನದಲ್ಲಿ ವಿಲೀನಗೊಳಿಸಬೇಕು, ರಾಜ್ಯದಲ್ಲಿ 6ನೇ ವೇತನ ಆಯೋಗ ರಚನೆ ಮಾಡಿ ಶೀಘ್ರದಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ ವೇತನ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ಸರ್ಕಾರಿ ನೌಕರರ ಒಕ್ಕೂಟದ ಆಶ್ರಯದಲ್ಲಿ ಸೋಮವಾರ ಪತ್ರಚಳವಳಿ ಆರಂಭವಾಯಿತು.

ನಗರದ ಪ್ರಧಾನ ಅಂಚೆ ಕಚೇರಿಯ ಮುಂದೆ ಸಮಾವೇಶಗೊಂಡಿದ್ದ ಸರ್ಕಾರಿ ನೌಕರರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಸಾಮೂಹಿಕವಾಗಿ ಅಂಚೆಗೆ ಹಾಕುವ ಮೂಲಕ ಪತ್ರ ಚಳವಳಿಗೆ ಚಾಲನೆ ನೀಡಿದರು.

ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ರಾಮಚಂದ್ರ ಮುದಗಣ್ಣವರ, ಉಪಾಧ್ಯಕ್ಷ ವೀ. ಗುರುಮೂರ್ತಿ ಯರಗಂಬಳಿಮಠ, ಒಕ್ಕೂಟದ ರಾಜ್ಯ ಸಮಿತಿ ಸದಸ್ಯ ವಿ.ಆರ್. ನರಗುಂದ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರುಗೇಶ ಸವಣೂರ ಮೊದಲಾದವರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT