ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗವಿಕಲರ ರಾಷ್ಟ್ರೀಯ ವಾಲಿಬಾಲ್: ಫೈನಲ್‌ಗೆ ಕರ್ನಾಟಕ

Last Updated 20 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಳಗಾವಿ: ಕರ್ನಾಟಕ ಹಾಗೂ ಆಂಧ್ರಪ್ರದೇಶ ತಂಡಗಳು ನಗರದ ಸಿಪಿಇಡಿ ಮೈದಾನದಲ್ಲಿ ಭಾರತೀಯ ಪ್ಯಾರಾಲಿಂಪಿಕ್ ವಾಲಿಬಾಲ್ ಒಕ್ಕೂಟದ ಆಶ್ರಯದಲ್ಲಿ ನಡೆಯುತ್ತಿರುವ ಅಂಗವಿಕಲರ ರಾಷ್ಟ್ರೀಯ ಸ್ಟ್ಯಾಂಡಿಂಗ್ ವಾಲಿಬಾಲ್ ಚಾಂಪಿಯನ್‌ಷಿಪ್‌ನ ಫೈನಲ್ ಪ್ರವೇಶಿಸಿದವು.

ಶನಿವಾರ ನಡೆದ ಮೊದಲ ಸೆಮಿಫೈನಲ್‌ನಲ್ಲಿ ಕರ್ನಾಟಕ ತಂಡ 25-9, 25-10 ಪಾಯಿಂಟ್‌ಗಳಿಂದ  ಗೋವಾ ತಂಡವನ್ನು ಸೋಲಿಸಿತು. ಇನ್ನೊಂದು ಸೆಮಿಫೈನಲ್‌ನಲ್ಲಿ ಹರಿಯಾಣವನ್ನು 22-25, 16-25 ಪಾಯಿಂಟ್‌ಗಳಿಂದ ಆಂಧ್ರಪ್ರದೇಶ ತಂಡ ಮಣಿಸಿತು.

ಮೂರನೇ ಸ್ಥಾನಕ್ಕಾಗಿ ನಡೆದ ಪಂದ್ಯದಲ್ಲಿ ಹರಿಯಾಣ ತಂಡ 2-0 ಸೆಟ್‌ಗಳಿಂದ (25-10, 18-25) ಗೋವಾ ತಂಡವನ್ನು ಮಣಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT