ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗವಿಕಲರಿಗೆ ಮೀಸಲಾತಿ ಅನುಷ್ಠಾನವಾಗಲಿ

Last Updated 17 ಡಿಸೆಂಬರ್ 2012, 9:20 IST
ಅಕ್ಷರ ಗಾತ್ರ

ಗೌರಿಬಿದನೂರು: `ಅಂಗವಿಕಲರಿಗೆ ಸರ್ಕಾರ ನಿಗದಿಪಡಿಸಿರುವ ಶೇ 3 ಮೀಸಲಾತಿ ಸೌಲಭ್ಯವನ್ನು ಅಧಿಕಾರಿಗಳು, ಜನಪ್ರತಿನಿಧಿಗಳು ಕಡ್ಡಾಯವಾಗಿ ಪಾಲಿಸಬೇಕು' ಎಂದು ಶಾಸಕ ಎನ್.ಎಚ್.ಶಿವಶಂಕರರೆಡ್ಡಿ  ಸಲಹೆ ನೀಡಿದರು.

ವಿಶ್ವ ಅಂಗವಿಕಲರ ದಿನಾಚರಣೆ ಅಂಗವಾಗಿ ಪಟ್ಟಣದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಮೀಸಲಾತಿ ಸೌಲಭ್ಯ ಇದೆ ಎಂದು ಹೇಳಲಾಗುತ್ತಿದೆ. ಆದರೆ ಸಮರ್ಪಕವಾಗಿ ಅನುಷ್ಠಾನಗೊಂಡಿಲ್ಲ ಎಂದರು.

ವಿವಿಧ ಇಲಾಖೆಗಳಲ್ಲಿರುವ ಮೀಸಲಾತಿ ಸೌಲಭ್ಯ ಕೇಳಿ ಪಡೆಯುವ ಹಕ್ಕು ಅಂಗವಿಕಲರಿಗಿದೆ. ಸಮಾಜದ ಮುಖ್ಯವಾಹಿನಿಗೆ ಬರುವ ಮೂಲಕ ಸೌಲಭ್ಯ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ರಾಜ್ಯ ಅಂಗವಿಕಲರ ಅಧಿನಿಯಮ ಆಯುಕ್ತ ಕೆ.ವಿ. ರಾಜಣ್ಣ ಮಾತನಾಡಿ, ರಾಜ್ಯದಲ್ಲಿ ಅಂಗವಿಕಲರ ಪುನರ್ವಸತಿ ಯೋಜನೆಯಡಿ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಅಂಗವಿಕಲರ ಸಾಮರ್ಥ್ಯಕ್ಕೆ ತಕ್ಕಂತೆ ಉದ್ಯೋಗಾವಕಾಶ ಕಲ್ಪಿಸಲಾಗುತ್ತಿದೆ.

ಅರ್ಹ ಅಂಗವಿಕಲರಿಗೆ ಮಾಸಾಶನ ಸ್ಥಗಿತಗೊಂಡಿದ್ದರೆ, ಅದನ್ನು ತಕ್ಷಣವೇ ಒದಗಿಸಲಾಗುವುದು ಎಂದರು. ತಾಲ್ಲೂಕು ಮಟ್ಟದಲ್ಲಿ ನಡೆದ ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಆರ್.ನರಸಿಂಹಮೂರ್ತಿ, ಮುಖ್ಯ ಲೆಕ್ಕಾಧಿಕಾರಿ ರೇವಣ್ಣ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎನ್.ನಿರಂಜನ್, ಉಪಾಧ್ಯಕ್ಷೆ ಜಲಜಾ, ಮಾಜಿ ಅಧ್ಯಕ್ಷರಾದ ಶ್ರೀನಿವಾಸಪ್ಪ, ಚಿನ್ನಪ್ಪರೆಡ್ಡಿ, ಸದಸ್ಯರಾದ ಕಾಂತಪ್ಪ, ಗಂಗರತ್ನಮ್ಮ, ಶಿವಶಂಕರ್, ಕೆ.ಪ್ರಭಾ, ಜಿಲ್ಲಾ ಪಂಚಾಯಿತಿ ಸದಸ್ಯ ಚಿನ್ನಪ್ಪಯ್ಯ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರೆಡ್ಡಪ್ಪ, ಜಿಲ್ಲಾ ಎಲ್‌ಎಲ್‌ಸಿ ಸಮಿತಿ ಸದಸ್ಯ ಲೇಪಾಕ್ಷಿ ಸಂತೋಷ್‌ರಾವ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT