ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗವಿಕಲರಿಗೆ ವಿಶೇಷ ನೀತಿ ರೂಪಿಸಲು ಸಲಹೆ

Last Updated 25 ಜನವರಿ 2011, 20:05 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ:  ‘ಅಂಗವಿಕಲರಿಗೆ ಸರ್ಕಾರ ವಿಶೇಷ ನೀತಿ ರೂಪಿಸುವ ಮೂಲಕ ವಿಶೇಷ ಅಗತ್ಯ ಉಳ್ಳವರ  ಕೊರತೆ ನೀಗಿಸಬೇಕು’ ಎಂದು ಜಿ.ಪಂ. ಉಪ ಕಾರ್ಯದರ್ಶಿ ನಾಗರಾಜು ಸಲಹೆ ನೀಡಿದರು.

ಮಂಗಳವಾರ ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ವಿಶ್ವ ಅಂಗವಿಕಲ ದಿನಾಚರಣೆ ಅಂಗವಾಗಿ  ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಗಾಲಲಿ ಕುರ್ಚಿ  ವಿತರಿಸಿ ಅವರು ಮಾತನಾಡಿದರು. ‘ಬುದ್ಧಿಮಾಂದ್ಯ ಹಾಗೂ ಅಂಗವಿಕಲ ಮಕ್ಕಳ ಬಗ್ಗೆ ಪೋಷಕರು ಹೆಚ್ಚು ಪ್ರೀತಿ ತೋರಿಸಬೇಕು. ಸರ್ವ ಶಿಕ್ಷಣ ಅಭಿಯಾನ ಯೋಜನೆಯಡಿ ನೇಮಕಗೊಂಡಿರುವ ಸ್ವಯಂ ಸೇವಕರು ಈ ಮಕ್ಕಳಿಗೆ ಕೌಶಲ್ಯಗಳನ್ನು ಕಲಿಸಬೇಕು. ಊಟ, ಶೌಚ ಹಾಗೂ ಇತರ ಅಗತ್ಯ ಕೆಲಸಗಳನ್ನು ಕಲಿಸಬೇಕು’ ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಜಗದೀಶ್, ‘ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಗೃಹಾಧಾರಿತ ಶಿಕ್ಷಣ  ನೀಡಲಾಗುತ್ತಿದೆ. ಅದಕ್ಕೆ ನಿಯೋಜಿತ ಶಿಕ್ಷಕರು ಮನೆ ಮನೆಗೆ ತೆರಳಿ ತರಬೇತಿ ನೀಡುತ್ತಿದ್ದಾರೆ. ಮಕ್ಕಳ ಚಟುವಟಿಕೆಯಲ್ಲಿ ಪ್ರಗತಿ ಕಂಡು ಬರುತ್ತಿದೆ. ಸ್ವಯಂ ಸೇವಕರು ಮತ್ತಷ್ಟು ಮುತುವರ್ಜಿ ವಹಿಸಿದರೆ ನಿರೀಕ್ಷಿತ ಪ್ರಗತಿ ಸಾಧ್ಯವಾಗುತ್ತದೆ’ ಎಂದರು.

ಶಿಕ್ಷಣ ಸಮನ್ವಯಾಧಿಕಾರಿ ಬಿ.ಜಗದೀಶ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಜೆ.ಶ್ರೀನಿವಾಸ್, ಶಿಕ್ಷಕರ ಸಂಘದ ಅಧ್ಯಕ್ಷ ಸಿದ್ದಲಿಂಗು, ಸಿಡಿಪಿಓ ರಾಮಕೃಷ್ಣಯ್ಯ, ಸಯ್ಯದ್‌ಖಾನ್ ಬಾಬು, ತೋಟಪ್ಪ, ಸಹದೇವಪ್ಪ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT