ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಚೆ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

Last Updated 17 ಅಕ್ಟೋಬರ್ 2012, 7:30 IST
ಅಕ್ಷರ ಗಾತ್ರ

ಮಂಡ್ಯ: ಗ್ರಾಮೀಣ ಪ್ರದೇಶದಲ್ಲಿ ಅಂಚೆ ಸೇವೆ ಸಲ್ಲಿಸುತ್ತಿರುವ ನೌಕರರ ಕೆಲಸವನ್ನು ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ್ ಅಂಚೆ ಇಲಾಖೇತರ ನೌಕರರ ಸಂಘದ ಸದಸ್ಯರು ಮಂಗಳವಾರ ನಗರದ ಪ್ರಧಾನ ಅಂಚೆ ಕಚೇರಿ ಎದುರು ಅನಿರ್ದಿಷ್ಟ ಧರಣಿ ಆರಂಭಿಸಿದರು.

ದೇಶದಾದ್ಯಂತ ಧರಣಿ ಮಾಡಲಾಗುತ್ತಿದ್ದು, ಅದನ್ನು ಬೆಂಬಲಿಸಿ ಮಂಡ್ಯದಲ್ಲಿಯೂ ಧರಣಿ ಆರಂಭಿಸಲಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.

150 ವರ್ಷಗಳಿಂದ ಅಂಚೆ ಇಲಾಖೆ ಕೆಲಸ ನಿರ್ವಹಿಸುತ್ತಿದೆ. ಆದರೆ, ಇಂದಿಗೂ ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸುತ್ತಿರುವವರನ್ನು ಕಾಯಂಗೊಳಿಸಿಲ್ಲ. ಕೂಡಲೇ ಕಾಯಂಗೊಳಿಸಲು ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಸಂಘದ ಪದಾಧಿಕಾರಿಗಳಾದ ಎನ್.ಕೆ.ಸತೀಶ್‌ಚಂದ್ರ, ಶ್ರೀನಿವಾಸು ಹಾಗೂ ಶಿವಕುಮಾರ್ ಪ್ರತಿಭಟನೆಯ ಮುಂಚೂಣಿಯಲ್ಲಿದ್ದರು.

ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಧರಣಿ
ನಾಗಮಂಗಲ: ವಿವಿಧ ಬೇಡಿಕೆಗಳು ಈಡೇರುವವರೆಗೆ ಅನಿರ್ದಿಷ್ಟ ಕಾಲ ಮುಷ್ಕರ ಘೋಷಿಸಿ ಅಂಚೆ ಇಲಾಖೆ ನೌಕರರು ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ಪಟ್ಟಣದ ಅಂಚೆ ಕಚೇರಿ ಎದುರು ಕಂಡು ಬಂದಿತು.

ವಿವಿಧ ಬೇಡಿಕೆಗಳು: 22-04-1977 ರ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಮತ್ತು ಜಸ್ಟೀಸ್ ತಲವಾರ್ ಸಮಿತಿಯ ವರದಿಯ ಅನುಸಾರ 5 ಗಂಟೆಗಿಂತ ಹೆಚ್ಚು ಕೆಲಸ ನಿರ್ವಹಿಸುತ್ತಿರುವ ನೌಕರರನ್ನು ಅಂಚೆ ಇಲಾಖೆಯ ಕಾಯಂ ನೌಕರರನ್ನಾಗಿ ಮಾಡುವುದು.

ಅಂಚೆ ಪೇದೆ, ಮೇಲ್ ಗಾರ್ಡ್ ಮತ್ತು ಎಂ.ಟಿ.ಎಸ್ ಕೆಲಸಕ್ಕೆ ಜಿಡಿಎಸ್ ನೌಕರರನ್ನು ನೇಮಕ ಮಾಡುವುದು. ಇಲಾಖೆಯಲ್ಲಿ ಇರುವ ಜಿಡಿಎಸ್ ನೌಕರರ ಹಲವಾರು ಖಾಲಿ ಹುದ್ದೆಗಳನ್ನು ರದ್ದುಗೊಳಿಸದೆ ಜಿಡಿಎಸ್ ನೌಕರರನ್ನು ಶೀಘ್ರವಾಗಿ ನೇಮಕ ಮಾಡುವುದು. ವೇತನ ಕಡಿತ ನಿಲ್ಲಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸಿದರು.

ಮಂಡ್ಯ ವಿಭಾಗದ ಎ.ಐ. ಪಿ.ಯು.ಇ.ಡಿ. ವಿಭಾಗದ ಅಧ್ಯಕ್ಷ ಎನ್.ಕೆ.ಸತೀಶ್‌ಚಂದ್ರ, ಕಾರ್ಯದರ್ಶಿ ಶ್ರೀನಿವಾಸ್ ಹಾಗು ನಾಗಮಂಗಲ ಅಂಚೆ ಕಚೇರಿಯ ಸಿಬ್ಬಂದಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT