ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಚೆ ಕಚೇರಿಗಳಲ್ಲಿ 1ಸಾವಿರ ಎಟಿಎಂ ಸ್ಥಾಪನೆಗೆ ಚಿಂತನೆ

Last Updated 11 ಮೇ 2012, 9:00 IST
ಅಕ್ಷರ ಗಾತ್ರ

ನವದೆಹಲಿ, (ಪಿಟಿಐ): ಅಂಚೆ ಕಚೇರಿಗಳಲ್ಲಿ 1 ಸಾವಿರಕ್ಕೂ ಅಧಿಕ ಎಟಿಎಂ ಕೇಂದ್ರಗಳನ್ನು ಸ್ಥಾಪಿಸುವ ಚಿಂತನೆ ನಡೆಸಲಾಗಿದೆ ಎಂದು ಟೆಲಿಕಾಂ ಸಚಿವ ಕಪಿಲ್ ಸಿಬಲ್ ಅವರು ಶುಕ್ರವಾರ ರಾಜ್ಯಸಭೆಯಲ್ಲಿ ತಿಳಿಸಿದರು.

ರಾಜ್ಯಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಪ್ರಸ್ತಾಪಗೊಂಡ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿಬಲ್ ಅವರು, ~ಪ್ರಸ್ತುತ ರಾಷ್ಟ್ರದಾದ್ಯಂತ ಸುಮಾರು 1,54,688 ಅಂಚೆ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ನಮ್ಮ ರಾಷ್ಟ್ರದಲ್ಲಿನ ಅಂಚೆ ಕಚೇರಿ ಜಾಲವು ವಿಶ್ವದಲ್ಲಿಯೇ ಅತಿ ದೊಡ್ಡದು~ ಎಂದು ಅವರು ಬಣ್ಣಿಸಿದರು. 

ಅಂಚೆ ಕಚೇರಿಯ ಕಾರ್ಯ ವ್ಯಾಪ್ತಿಯನ್ನು ಇನ್ನೂ ಹೆಚ್ಚಿಸುವ ಹಾಗೂ ಇಲ್ಲಿಗೆ ಆಗಮಿಸುವ ಜನಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಂಚೆ ಕಚೇರಿಗಳಲ್ಲಿ ಸುಮಾರು 1ಸಾವಿರಕ್ಕೂ ಅಧಿಕ ಎಟಿಎಂ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಅವುಗಳನ್ನು ~ಕೋರ್ ಬ್ಯಾಂಕಿಂಗ್~ ವ್ಯವಸ್ಥೆಗೆ ಪರಿವರ್ತಿಸಲಾಗುವುದು ಎಂದರು. 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT