ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತಃಕರಣ ದೂರ: ತೀವ್ರ ಕಳವಳ

Last Updated 1 ಜುಲೈ 2013, 5:29 IST
ಅಕ್ಷರ ಗಾತ್ರ

ಮಸ್ಕಿ: ಜಾಗತಿಕರಣ, ಖಾಸಗಿಕರಣ ಹಾಗೂ ಉದಾರೀಕರಣದಿಂದ ಆಂತಃಕರಣ ದೂರವಾಗುತ್ತಿರುವುದು ವಿಷಾದನೀಯ ಎಂದು ಸಾಹಿತಿ ಡಾ. ಸ್ವಾಮಿರಾವ್ ಕುಲಕರ್ಣಿ ಶನಿವಾರ ಇಲ್ಲಿ ತಿಳಿಸಿದರು.

ಮಸ್ಕಿಯ ಭ್ರಮರಾಂಬ ದೇವಸ್ಥಾನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಸ್ಕಿ ಘಟಕ ಉದ್ಘಾಟಿಸಿ ಮಾತನಾಡಿ, ಕಳೆದ ದಶಕಗಳಿಂದಿನ ಸಂದರ್ಭ ಹೋಲಿಸಿದರೆ ಅಂದು ಸೌಲಭ್ಯದ ಕೊರತೆ ಇತ್ತು. ಆದರೆ, ಬದುಕು ನೆಮ್ಮದಿಯಿಂದ ಕೂಡಿತ್ತು. ಆದರೆ, ಇಂದು ಸೌಲಭ್ಯ ಬೇಕಾದಷ್ಟು ಇದ್ದರೂ ನೆಮ್ಮದಿ ಇಲ್ಲವಾಗಿದೆ ಎಂದರು.

ಇಂತಹ ಸಮಯದಲ್ಲಿ ಸಾಹಿತ್ಯ ಅಭ್ಯಾಸ, ಸಾಹಿತ್ಯದ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ನೆಮ್ಮದಿಯನ್ನು, ಬದುಕಿನ ಪರಿವರ್ತನೆಯನ್ನು ಮಾಡಿಕೊಳ್ಳಲು ಸಾಧ್ಯತೆ ಇದೆ ಎಂದು ಅವರು ತಿಳಿಸಿದರು.

ಪರಿಷತ್ತಿನ ಮಸ್ಕಿ ಘಟಕದ ಅಧ್ಯಕ್ಷ ಗುಂಡುರಾವ್ ದೇಸಾಯಿ ಪ್ರಸ್ತಾವಿಕ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಮಹಾದೇವಪ್ಪಗೌಡ ಪೊ. ಪಾಟೀಲ, ಗ್ರಾಮ ಪಂಚಾಯಿತಿ ಅಧ್ಯಕ್ಷ ಅಮರೇಶ ಮಸ್ಕಿ, ಎಪಿಎಂಸಿ ಅಧ್ಯಕ್ಷ ಮಂಜುನಾಥ ಪಾಟೀಲ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಮಹಾಂತೇಶ ಮಸ್ಕಿ, ತಾಲ್ಲೂಕು ಪಂಚಾಯಿತಿ ಸದಸ್ಯ ನೀಲಮ್ಮ ಮರಳದ, ಹನುಮಂತಪ್ಪ ಮೋಚಿ ವೇದಿಕೆ ಮೇಲೆ ಉಪಸ್ಥಿತರಿದ್ದರು.

ವಿನೋದ ಹಳ್ಳಿ ಸ್ವಾಗತಿಸಿದರು, ಅಡೆವೇಶ ಬುಳ್ಳಾ ವಂದಿಸಿದರು. ವಿಜಯಲಕ್ಷ್ಮೀ ಕಂದಗಲ್ ನಿರೂಪಿಸಿದರು.
ಇದೇ ಸಂದಭಧಲ್ಲಿ ಡಾ. ಸ್ವಾಮಿರಾವ್ ಕುಲಕರ್ಣಿ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಮರೇಶ ಮಸ್ಕಿ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ ಮಸ್ಕಿ ಘಟಕ ವತಿಯಿಂದ ಸನ್ಮಾನಿಸಲಾಯಿತು.

ಹುಚ್ಚಪ್ಪ ಹಾಗೂ ಸಂಗಡಿಗರ ಡೊಳ್ಳು ಪದದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಂಗಮ್ಮ ಕರಡಕಲ್, ಚಂದ್ರಕಾಂತ ಜೋಷಿ, ಶೈಲಜಾ ಬನ್ನಿಕೊಪ್ಪ, ಚಿದಂಬರ ಹಾಗೂ ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT