ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರ ವಿವಿ ಈಜು: ಮತ್ತೆ ಮಿಂಚಿದ ಆ್ಯರನ್, ಸುರಭಿ ತಿಪ್ರೆ

Last Updated 20 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಕೋಲ್ಕತ್ತ: ಆ್ಯರನ್ ಡಿಸೋಜಾ, ಸುರಭಿ ತಿಪ್ರೆ ಮತ್ತು ಫರಿಹಾ ಜಮಾನ್ ಇಲ್ಲಿ ನಡೆಯುತ್ತಿರುವ ಅಖಿಲ ಭಾರತ ಅಂತರ ವಿವಿ ಈಜು ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ `ಬೇಟೆ~ ಮುಂದುವರಿಸಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸುತ್ತಿರುವ ಆ್ಯರನ್ ಗುರುವಾರ ಪುರುಷರ 200 ಮೀ. ವೈಯಕ್ತಿಕ ಮೆಡ್ಲೆ, 100 ಮೀ. ಬ್ಯಾಕ್‌ಸ್ಟ್ರೋಕ್ ಹಾಗೂ 50 ಮೀ. ಫ್ರೀಸ್ಟೈಲ್ ಸ್ಪರ್ಧೆಗಳಲ್ಲಿ ಬಂಗಾರದ ಪದಕ ಗೆದ್ದುಕೊಂಡರು. ಮಾತ್ರವಲ್ಲ, ಈ ಹಾದಿಯಲ್ಲಿ ಎರಡು ಕೂಟ ದಾಖಲೆಗಳನ್ನೂ ತಮ್ಮ ಹೆಸರಿಗೆ ಬರೆಯಿಸಿಕೊಂಡರು.

ಆ್ಯರನ್ ಪುರುಷರ 200 ಮೀ. ವೈಯಕ್ತಿಕ ಮೆಡ್ಲೆ ಸ್ಪರ್ಧೆಯಲ್ಲಿ 2:09.09 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಹಳೆಯ ದಾಖಲೆಯನ್ನು ಮುರಿದರು. 100 ಮೀ. ಬ್ಯಾಕ್‌ಸ್ಟ್ರೋಕ್ ಸ್ಪರ್ಧೆಯಲ್ಲಿ ಕೂಟ ದಾಖಲೆಯೊಂದಿಗೆ 59.16 ಸೆಕೆಂಡ್‌ಗಳಲ್ಲಿ ಗುರಿ ಮುಟ್ಟಿದರು. 50 ಮೀ. ಫ್ರೀಸ್ಟೈಲ್ ಸ್ಪರ್ಧೆಯಲ್ಲೂ ಪ್ರಭುತ್ವ ಮೆರೆದ ಅವರು 23.91 ಸೆ.ಗಳಲ್ಲಿ ಗುರಿ ತಲುಪಿ ಅಗ್ರಸ್ಥಾನ ಪಡೆದರು.

ಜೈನ್ ವಿಶ್ವವಿದ್ಯಾಲಯದ ಸುರಭಿ ಮಹಿಳೆಯರ 200 ಮೀ. ವೈಯಕ್ತಿಕ ಮೆಡ್ಲೆ ಸ್ಪರ್ಧೆಯಲ್ಲಿ ನೂತನ ಕೂಟ ದಾಖಲೆಯೊಂದಿಗೆ ಬಂಗಾರದ ಪದಕ ತಮ್ಮದಾಗಿಸಿಕೊಂಡರು. ಅವರು 2:29.46 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಈ ಸಾಧನೆ ಮಾಡಿದರು. ಮಹಿಳೆಯರ 100 ಮೀ. ಬ್ಯಾಕ್‌ಸ್ಟ್ರೋಕ್ ಸ್ಪರ್ಧೆಯಲ್ಲಿ ಜೈನ್ ವಿಶ್ವವಿದ್ಯಾಲಯದ ಫರಿಹಾ ಜಮಾನ್ 1:09.66 ಸೆಕೆಂಡ್‌ಗಳಲ್ಲಿ ಮೊದಲಿಗರಾಗಿ ಗುರಿಮುಟ್ಟಿದರು.

ಜೈನ್ ವಿಶ್ವವಿದ್ಯಾಲಯದ ತಂಡ ಮಹಿಳೆಯರ 4X100 ಮೀ. ರಿಲೇ ಸ್ಪರ್ಧೆಯಲ್ಲಿ ಕೂಟ ದಾಖಲೆಯೊಂದಿಗೆ ಚಿನ್ನ ಗೆದ್ದುಕೊಂಡಿತು. ಫರಿಹಾ, ಸುರಭಿ ಪೂರ್ವ ಶೆಟ್ಟಿ ಮತ್ತು ಲೇಖಾ ಕಾಮತ್ ಅವರನ್ನೊಳಗೊಂಡ ತಂಡ 4:26.52 ಸೆ.ಗಳಲ್ಲಿ ಗುರಿ ತಲುಪಿತು. ಬೆಂಗಳೂರು ವಿಶ್ವವಿದ್ಯಾಲಯ 2004 ರಲ್ಲಿ ಸ್ಥಾಪಿಸಿದ್ದ ದಾಖಲೆಯನ್ನು (4.29.43ಸೆ.) ಈ ತಂಡ ಮುರಿಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT