ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರ್ಜಾಲದಲ್ಲಿ ನೇರ ಪ್ರಸಾರ

Last Updated 19 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಆಗ್ರಾ (ಐಎಎನ್‌ಎಸ್): ಇದೇ ಮೊದಲ ಬಾರಿಗೆ ಫೆಬ್ರುವರಿ 28ರಂದು ಆಗ್ರಾದ  50 ಕೇಂದ್ರಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣಾ ಪ್ರಕ್ರಿಯೆಗಳನ್ನು  ಚುನಾವಣಾ ಆಯೋಗದ ಅಧಿಕಾರಿಗಳು ನೇರವಾಗಿ ಅಂತರ್ಜಾಲದ ಮೂಲಕ ವೀಕ್ಷಿಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಂತರ್ಜಾಲದಲ್ಲಿ ನೇರವಾಗಿ ಪ್ರಸಾರ ಮಾಡುವ ಯೋಜನೆಯನ್ನು ಯಶಸ್ವಿಗೊಳಿಸಲು ಈಗಾಗಲೇ ತಾಂತ್ರಿಕ ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅಜಯ್ ಚೌಹಾಣ್ ಹೇಳಿದ್ದಾರೆ. ಈ ಪ್ರಸಾರಕ್ಕೆ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಬ್ರಾಡ್‌ಬ್ಯಾಂಡ್ ಸಂಪರ್ಕ ಒದಗಿಸಲಿದೆ.

ಸಂಪೂರ್ಣ ಚುನಾವಣಾ ಪ್ರಕ್ರಿಯೆಗಳನ್ನು ಸಿ.ಡಿಗಳಲ್ಲಿ ಮುದ್ರಿಸಲಾಗುವುದು. ಇವುಗಳನ್ನು ಜಿಲ್ಲಾ ಪ್ರಧಾನ ಕಚೇರಿಗಳಲ್ಲಿ ಇಡಲಾಗುವುದು ಎಂದು ಅವರು ಹೇಳಿದ್ದಾರೆ.

ಮತಗಟ್ಟೆಗಳ ಮೇಲ್ವಿಚಾರಣೆ ನೋಡಿಕೊಳ್ಳುತ್ತಿರುವ ಸಿಬ್ಬಂದಿ ಮತ್ತು ಏಜೆಂಟರ ಪ್ರತಿ ಚಟುವಟಿಕೆಗಳನ್ನು ಈ ಸಿ.ಡಿಗಳಲ್ಲಿ ದಾಖಲಿಸಲಾಗುವುದು ಎಂದು ಚೌಹಾಣ್ ಅವರು ಹೇಳಿದ್ದಾರೆ.

ಕಿರು ಸಂದೇಶ ಸೇವೆ (ಎಸ್‌ಎಂಎಸ್) ಮೂಲಕ ಚುನಾವಣಾ ದಿನದ ಮೇಲ್ವಿಚಾರಣೆ ವ್ಯವಸ್ಥೆಯನ್ನು ನೋಡಿಕೊಳ್ಳುವ ಜಾಲವನ್ನು ಈಗಾಗಲೇ ಸ್ಥಾಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.

`ಈ ವ್ಯವಸ್ಥೆಯು ತುಂಬಾ ಸರಳವಾಗಿದ್ದು, ಪ್ರಾಯೋಗಿಕವಾಗಿದೆ. ಕೆಲವು ಮಹತ್ವದ ಮಾಹಿತಿಗಳನ್ನು ಅಧಿಕಾರಿಗಳಿಗೆ ತುರ್ತಾಗಿ ರವಾನಿಸುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ಅಳವಡಿಸಲಾಗಿದೆ~ ಎಂದು ಅವರು ಹೇಳಿದ್ದಾರೆ.

`ಮತದಾನದ ಪ್ರಗತಿಯ ಕುರಿತಾಗಿ, ಶೇಕಡಾವಾರು ಮತದಾನದ ಅಂಕಿ ಅಂಶಗಳನ್ನು ಪ್ರತಿ ಎರಡು ಗಂಟೆಗಳಿಗೊಮ್ಮೆ ಇದರ ಮೂಲಕ ಚುನಾವಣಾ ಅಧಿಕಾರಿಗಳಿಗೆ ರವಾನಿಸಲಾಗುವುದು~ ಎಂದು ಚೌಹಾಣ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT