ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂದು ಶತ್ರುಗಳು, ಇಂದು ಮಿತ್ರರು

Last Updated 18 ಏಪ್ರಿಲ್ 2013, 12:56 IST
ಅಕ್ಷರ ಗಾತ್ರ

ಚಿಕ್ಕೋಡಿ: `ರಾಜಕೀಯದಲ್ಲಿ ಯಾರೂ ಶತ್ರುಗಳಲ್ಲ, ಯಾರೂ ಮಿತ್ರರಲ್ಲ' ಎಂಬ ಮಾತು ಇಲ್ಲಿ ಅಕ್ಷರಶಃ ನಿಜವಾಗಿದೆ. ಹಿಂದೊಂದು ದಿನ ಚುನಾವಣೆಯಲ್ಲಿ ಎದುರಾಳಿಯಾಗಿದ್ದ ಅಭ್ಯರ್ಥಿಗಳಿಬ್ಬರೂ ಬುಧವಾರ ಒಂದಾಗಿ ಮತಯಾಚನೆ ಮಾಡುತ್ತಿದ್ದಾರೆ!

ಹೌದು, ಕ್ಷೇತ್ರ ಪುನರ್ವಿಂಗಡಣೆ ಮೊದಲು ತಾಲ್ಲೂಕಿನ ಸದಲಗಾ ಮತಕ್ಷೇತ್ರದಲ್ಲಿ ರಾಜ್ಯ ವಿಧಾನಸಭೆ ಚುನಾವಣೆಗೆ ಎರಡು ಬಾರಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಅವರ ಪ್ರತಿಸ್ಪರ್ಧಿಯಾಗಿದ್ದ ಕಲ್ಲಪ್ಪಣ್ಣ ಮಗೆನ್ನವರ ಬದಲಾದ ರಾಜಕೀಯ ಪರಿಸ್ಥಿತಿಗೆ ಅನುಗುಣವಾಗಿ  ಪ್ರಸಲ್ತ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ `ಕೈ' ಜೋಡಿಸಿ ಪ್ರಕಾಶ ಹುಕ್ಕೇರಿ ಅವರ ಬೆಂಬಲಕ್ಕೆ ನಿಂತಿದ್ದಾರೆ.

1985ರಲ್ಲಿ ಸದಲಗಾ ವಿಧಾನಸಭೆ ಕ್ಷೇತ್ರದಲ್ಲಿ ಜನತಾಪಕ್ಷದಿಂದ ಸ್ಪರ್ಧಿಸಿದ್ದ ಕಲ್ಲಪ್ಪ ಮಗೆನ್ನವರ ಪ್ರತಿಸ್ಪರ್ಧಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಅಭ್ಯರ್ಥಿಯಾಗಿದ್ದ ಪ್ರಭಾಕರ ಬಿ.ಕೋರೆ ಅವರ ವಿರುದ್ದ  4010 ಮತಗಳ ಅಂತರದಿಂದ ಗೆದ್ದು ವಿಧಾನಸಭೆಗೆ ಆಯ್ಕೆಯಾಗಿದ್ದರು. 1989ರಲ್ಲಿ ನಡೆದ ಚುನಾವಣೆಯಲ್ಲಿ ಜನತಾದಳದಿಂದ ಮತ್ತೆ ಪುನರಾಯ್ಕೆ ಬಯಸಿ ಕಣಕ್ಕಿಳಿದಿದ್ದ ಮಗೆನ್ನವರ ಕಾಂಗ್ರೆಸ್‌ನ ವೀರಕುಮಾರ ಪಾಟೀಲ ಅವರ ಎದುರು ಕೇವಲ 173 ಮತಗಳ ಅಂತರದಿಂದ ಸೋಲು ಉಂಡಿದ್ದರು. ಆದರೂ, ಹಠ ಬಿಡದ ಕಲ್ಲಪ್ಪ ಮಗೆನ್ನವರ 1994ರಲ್ಲಿ ಜನತಾದಳ ಹಾಗೂ 1999ರಲ್ಲಿ ನಡೆದ ಚುನಾವಣೆಯಲ್ಲಿ ಸಂಯುಕ್ತ ಜನತಾದಳದಿಂದ ಸ್ಪರ್ಧಿಸಿ ಕಾಂಗ್ರೆಸ್‌ನ ಪ್ರಕಾಶ ಹುಕ್ಕೇರಿ ಅವರ ಎದುರು ಎರಡೂ ಬಾರಿ ಪರಾಭವಗೊಂಡಿದ್ದರು. ನಂತರದ ಚುನಾವಣೆಗಳಲ್ಲಿ ತಾವು ಸ್ಪರ್ಧಿಸದಿದ್ದರೂ ಕಾಂಗ್ರೆಸ್ಸೇತರ ಅಭ್ಯರ್ಥಿಗಳ ಪರವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು.

ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ವರಿಷ್ಠರು ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಕಾಗವಾಡ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡಿದ್ದಾರೆ ಎಂದು ಮುನಿಸಿಕೊಂಡು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಚಿಕ್ಕೋಡಿ- ಸದಲಗಾ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಅವರ ಗೆಲುವಿಗೆ ಒಟ್ಟಾಗಿ ಪ್ರಚಾರ ಕೈಗೊಂಡು ಶ್ರಮಿಸುತ್ತಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT