ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್ ಜಯಂತ್ಯುತ್ಸವ

Last Updated 21 ಏಪ್ರಿಲ್ 2013, 19:58 IST
ಅಕ್ಷರ ಗಾತ್ರ

ಕೃಷ್ಣರಾಜಪುರ:  `ಅಪಾರಜ್ಞಾನ, ವಿದ್ವತ್ ಮೂಲಕ ಪ್ರಬುದ್ಧ ಭಾರತದ ಪರಿಕಲ್ಪನೆಯ ಬಗ್ಗೆ ಸಾಮಾಜಿಕ ನ್ಯಾಯ ಒದಗಿಸಿದ ಸಂವಿಧಾನಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳನ್ನು ಯುವ ಪೀಳಿಗೆ ಮೈಗೂಡಿಸಿಕೊಳ್ಳಬೇಕು' ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಬೆಂಗಳೂರು ಪೂರ್ವ ತಾಲ್ಲೂಕು ಘಟಕದ ಸಂಘಟನಾ ಸಂಚಾಲಕ ಎಂ.ಎನ್.ಶೇಖರ್ ಸಲಹೆ ನೀಡಿದರು.

ರಾಮಮೂರ್ತಿನಗರ ಅಂಬೇಡ್ಕರ್ ನಗರದಲ್ಲಿ ಈಚೆಗೆ ಏರ್ಪಡಿಸಿದ್ದ ಅಂಬೇಡ್ಕರ್ ಅವರ 122ನೇ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.

ಅಂಬೇಡ್ಕರ್ ವಿಚಾರಧಾರೆಗಳು ಇಂದಿಗೂ ಪ್ರಸ್ತುತ. ಅವರ ಆದರ್ಶಗಳು ಜಾತಿ, ಧರ್ಮ ಪಂಗಡಕ್ಕೆ ಸೀಮಿತವಾಗದೆ ಆರ್ಥಿಕವಾಗಿ ಹಿಂದುಳಿದ ಎಲ್ಲ ವರ್ಗಗಳಿಗೂ ಅನ್ವಯಿಸುವಲ್ಲಿ ಯಶಸ್ವಿಯಾಗಿವೆ ಎಂದು ಅವರು ತಿಳಿಸಿದರು.
ಬೆಂಗಳೂರು ಪೂರ್ವ ತಾಲ್ಲೂಕು ಘಟಕದ ಮುನಿನಂಜಪ್ಪ, ಶ್ರೀನಿವಾಸ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT