ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್ ವಿರುದ್ಧದ ಪುಸ್ತಕ ನಿಷೇಧಕ್ಕೆ ಆಗ್ರಹ

Last Updated 22 ಮೇ 2012, 5:25 IST
ಅಕ್ಷರ ಗಾತ್ರ

ಕನಕಪುರ: ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನವನ್ನು ಬರೆದಿಲ್ಲ. ಕೇವಲ ಓದಿದರೆಂಬ ಪುಸ್ತಕವನ್ನು ಬರೆಯುವ ಮೂಲಕ ಜನತೆಯ ದಿಕ್ಕುತಪ್ಪಿಸಲು ಹೊರಟಿರುವ ಪ್ರಾಂಶುಪಾಲ ಪಿ.ಎ.ಕುಮಾರ್ ಅವರನ್ನು ಕೂಡಲೇ ಬಂಧಿಸಿ ದೇಶದಿಂದ ಗಡಿಪಾರು ಮಾಡಬೇಕು ಮತ್ತು ಅವರು ಬರೆದಿರುವ ಪುಸ್ತಕವನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ದಲಿತ ಹಿಂದುಳಿದವರ ವೇದಿಕೆ ಕಾರ್ಯಕರ್ತರು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನಾ ಧರಣಿ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷ ರಾಂಪುರ ನಾಗೇಶ್ ಮಾತನಾಡಿ, ಪಿ.ಎ.ಕುಮಾರ್ ಜನಸಾಮಾನ್ಯರನ್ನು ದಾರಿ ತಪ್ಪಿಸುವ ಕೆಲಸಕ್ಕೆ ಕೈಹಾಕಿದ್ದಾರೆ. ಸಮಾಜದ ಶಾಂತಿ ಕದಡಲು ಹೊರಟಿರುವ ಅವರನ್ನು ಹಾಗೂ ಇತರೆ ಮೂವರನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕೆಂದು ಆಗ್ರಹಿಸಿದರು.

ಸಮತಾ ಸೈನಿಕ ದಳದ ಜಿಲ್ಲಾದ್ಯಕ್ಷ ಜಿ.ಗೋವಿಂದಯ್ಯ ಮಾತನಾಡಿ, ಸಮಾಜದ ಶಾಂತಿ ಕದಡಿ ಜನಾಂಗೀಯ ಘರ್ಷಣೆಗೆ ನಾಂದಿ ಹಾಡುತ್ತಿರುವ ದೇಶದ್ರೋಹಿಗಳನ್ನು ಬಂಧಿಸಿ ಉಗ್ರ ಶಿಕ್ಷೆ ವಿಧಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಕೋಟೆಕುಮಾರ್, ಕೆ.ಎಚ್.ಜವರಯ್ಯ, ಸೇನಯ್ಯ, ಶಿವಕುಮಾರ್, ಕುಮಾರ್, ಸಿದ್ದಬೀರಯ್ಯ, ಹೊನ್ನಪ್ಪ, ಡಿ.ಸಿ.ಮರಿಯಪ್ಪ ಸೇರಿದಂತೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT