ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್ ಹೆಸರು ದುರ್ಬಳಕೆ; ಆತಂಕ

Last Updated 22 ಡಿಸೆಂಬರ್ 2012, 10:51 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಡಾ.ಬಿ.ಆರ್.ಅಂಬೇಡ್ಕರ್ ಹೆಸರನ್ನು ಕೆಲ ಸಂಘಟನೆಗಳು, ಕೆಲ ವ್ಯಕ್ತಿಗಳು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಎನ್.ಮಂಜುಳಾ ವಿಷಾದಿಸಿದರು.

ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ ಪ್ರಯುಕ್ತ ನಗರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `ಅಂಬೇಡ್ಕರ್ ಅವರು ಉದಾತ್ತ ವಿಚಾರ ಮತ್ತು ಸಂದೇಶಗಳನ್ನು ನೀಡಿದ್ದಾರೆ. ಆದರೆ ಕೆಲವರು ಅದನ್ನು ಸರಿಯಾಗಿ ಅರ್ಥ ಮಾಡಿಕೊಳ್ಳುತ್ತಿಲ್ಲ' ಎಂದರು.

`ದೇಶವನ್ನು ಪ್ರಗತಿಪಥದಲ್ಲಿ ಮುನ್ನಡೆಸಲು ಮತ್ತು ವೈಯಕ್ತಿಕವಾಗಿ ಉತ್ತಮ ಬೆಳವಣಿಗೆ ಕಂಡುಕೊಳ್ಳಲು ಅಂಬೇಡ್ಕರ್ ಸಾರಿದ ವಿಚಾರಗಳನ್ನು ಪರಿಪಾಲಿಸಿದರೆ ಸಾಕು. ಅವರ ವಿಷಯಗಳನ್ನು ಅರ್ಥೈಸಿಕೊಂಡು ಜೀವನದಲ್ಲಿ ಅಳವಡಿಸಿಕೊಂಡರೆ ಸನ್ಮಾರ್ಗದಲ್ಲಿ ಮುನ್ನಡೆಯಬಹುದು' ಎಂದರು.

`ಅಂಬೇಡ್ಕರ್ ವಿಚಾರಗಳನ್ನು ಸರಿಯಾಗಿ ಗ್ರಹಿಸದ ಕೆಲವರು ಪ್ರಾಮುಖ್ಯತೆ ನೀಡುವುದಿಲ್ಲ. ಪ್ರಾಮುಖ್ಯತೆ ಸಿಗದಿದ್ದಾಗ, ಅಂಬೇಡ್ಕರ್ ಹೆಸರಿನಲ್ಲಿ ಸಹಜವಾಗಿಯೇ ಅರ್ಥರಹಿತ ಕಾರ್ಯಕ್ರಮಗಳು ನಡೆಯುತ್ತವೆ' ಎಂದು ವಿಷಾದಿಸಿದರು.

ಅಂಬೇಡ್ಕರ್ ವಿಚಾರಧಾರೆ ಕುರಿತು ವಿಚಾರವಾದಿ ಬಿ.ಗೋಪಾಲ್ ಮಾತನಾಡಿದರು. ಅಹಿಂದ ರಾಜ್ಯ ಘಟಕದ ಅಧ್ಯಕ್ಷ ಮುಕ್ಕಡಪ್ಪ, ಛಲವಾದಿ ಮಹಾಸಭಾ ಮುಖಂಡರಾದ ಬಿ.ಎಂ.ಸಿದ್ದರಾಜು, ಪಿ.ಹನುಮಯ್ಯ, ಎಚ್.ಕೃಷ್ಣಪ್ಪ, ಕೆ.ನರಸಿಹಂಯ್ಯ, ಕೆ.ಎಚ್.ಮಂಜುನಾಥ್, ಸಿ.ವಿ.ಕೃಷ್ಣಪ್ಪ, ನರಸಿಂಹಯ್ಯ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT