ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಗಣಿ: ಕರ್ನಾಟಕದಲ್ಲೂ ಸಿಬಿಐ ತನಿಖೆಯಾಗಬೇಕು

Last Updated 5 ಸೆಪ್ಟೆಂಬರ್ 2011, 8:30 IST
ಅಕ್ಷರ ಗಾತ್ರ

ಬೆಂಗಳೂರು, (ಪಿಟಿಐ): ಮಾಜಿ ಸಚಿವ ಜಿ ಜನಾರ್ದನ ರೆಡ್ಡಿ ಮಾಲಿಕತ್ವದ ಓಬಳಾಪುರಂ ಗಣಿ ಕಂಪೆನಿ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದು, ಅದನ್ನು ಸಿಬಿಐ ತನಿಖೆಗೆ ಒಳಪಡಿಸಬೇಕೆಂದು ಕರ್ನಾಟಕ ಲೋಕಾಯುಕ್ತರಾಗಿ ನಿವೃತ್ತರಾಗಿರುವ ನಾಯ್ಯಮೂರ್ತಿ ಸಂತೋಷ ಹೆಗ್ಡೆ ಅವರು ಪ್ರತಿಪಾದಿಸಿದ್ದಾರೆ.

ಸೋಮವಾರ ಬೆಳಿಗ್ಗೆ ಜನಾರ್ದನ ರೆಡ್ಡಿ ಅವರನ್ನು ಸಿಬಿಐ ಬಂಧಿಸಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ರಾಜ್ಯದಲ್ಲಿ ನಡೆದ ಅಕ್ರಮ ಗಣಿಗಾರಿಕೆ ಕುರಿತು ತಾವು ಕಳೆದ ಜುಲೈ 27 ರಂದು ಸಲ್ಲಿಸಿದ್ದ ತನಿಖಾ ವರದಿಯ ಆಧಾರದ ಮೇಲೆ ಈ ಬಂಧನ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕ ಸರ್ಕಾರ ರಾಜ್ಯದಲ್ಲಿನ ಅಕ್ರಮ ಗಣಿಗಾರಿಕೆ ಕುರಿತ ತನಿಖೆಯನ್ನು ಸಿಬಿಐಗೆ ಒಪ್ಪಿಸಿಲ್ಲ. ಆಂಧ್ರ ಪ್ರದೇಶದ ಸರ್ಕಾರ ತಮ್ಮ ರಾಜ್ಯದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆ ಕುರಿತ ತನಿಖೆಯನ್ನು ಸಿಬಿಐಗೆ ಒಪ್ಪಿಸಿದ್ದ  ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಅವರ ಈ ಬಂಧನ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

~ಹಲವಾರು ಬಾರಿ ಓಎಂಸಿ ತಾನು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿಲ್ಲ ಎಂದು ಹೇಳಿಕೊಂಡಿದೆ. ಆದರೆ ನಾವು (ನಮ್ಮ ಲೋಕಾಯುಕ್ತ ವರದಿಯಲ್ಲಿ) ಅದು ಅಕ್ರಮಗಳಲ್ಲಿ ತೊಡಗಿರುವುದರ ಬಗ್ಗೆ ದಾಖಲೆ ಸಮೇತ  ತೋರಿಸಿದ್ದೇವೆ~ ಎಂದು ಅವರು ಹೇಳಿದ್ದಾರೆ.

ಕರ್ನಾಟಕ ಮತ್ತು ಆಂಧ್ರಪ್ರದೇಶಗಳಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆ ಕುರಿತು ಸಿಬಿಐ ತನಿಖೆ ಅಗತ್ಯವಾಗಿದೆ ಎಂದು ಪ್ರತಿಪಾದಿಸಿರುವ ಸಂತೋಷ್ ಹೆಗ್ಡೆ ಅವರು, ಕರ್ನಾಟಕದಲ್ಲಿನ ಓಎಂಸಿಯ ಅಕ್ರಮ ಗಣಿಗಾರಿಕೆ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂಬುದು ತಮ್ಮ ಅಭಿಪ್ರಾಯ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT