ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಫಿಲ್ಟರ್ ಮರಳು ದಂಧೆ: ದೂರು

Last Updated 14 ಜನವರಿ 2012, 18:55 IST
ಅಕ್ಷರ ಗಾತ್ರ

ಮಹದೇವಪುರ:  ಕ್ಷೇತ್ರದ ವಿವಿಧೆಡೆ ಅಕ್ರಮ ಫಿಲ್ಟರ್ ಮರಳು ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಆವಲಹಳ್ಳಿ, ಚೀಮಸಂದ್ರ, ಗುಂಜೂರು ಸಮೀಪದ ಸರ್ಜಾಪುರ, ದೊಮ್ಮಸಂದ್ರ ಸೇರಿದಂತೆ ಅನೇಕ ಕಡೆಗಳಲ್ಲಿ ಅಕ್ರಮ ಫಿಲ್ಟರ್ ಮರಳು ತಯಾರಿಕೆ ನಡೆಯುತ್ತಿದೆ. ಚೀಮಸಂದ್ರ ಗ್ರಾಮದಲ್ಲಿ ಮೂರ‌್ನಾಲ್ಕು ವರ್ಷಗಳಿಂದಲೂ ಈ ದಂಧೆ ನಡೆಯುತ್ತಿದೆ.

ಬಿದರಹಳ್ಳಿ ಗ್ರಾಮದಲ್ಲೂ ಇಂತಹ ಮರಳು ತಯಾರಿಕೆ ಘಟಕಗಳು ಇವೆ. ಅಲ್ಲದೆ ಟ್ರ್ಯಾಕ್ಟರ್ ಹಾಗೂ ಲಾರಿಗಳ ಮೂಲಕ ಇಲ್ಲಿನ ಬಿದರಹಳ್ಳಿ ಕೆರೆಯಿಂದಲೇ ಅಕ್ರಮವಾಗಿ ಮಣ್ಣು ತೆಗೆಯಲಾಗುತ್ತಿದೆ. ಆದರೆ ಸ್ಥಳೀಯ ಗ್ರಾಮ ಪಂಚಾಯಿತಿ ಅಥವಾ ಕಂದಾಯ ಇಲಾಖೆ ಗಮನಹರಿಸುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಮಾರಸಂದ್ರ, ಗುಂಡೂರು ಸೇರಿದಂತೆ ಸುತ್ತಮುತ್ತಲಿನ ಕೆಲ ಇಟ್ಟಿಗೆ ಗೂಡಿನ ಮಾಲೀಕರು ಕೂಡ ಇದೇ ಕೆರೆಯ ಒಡಲಿನಿಂದ ಅಕ್ರಮವಾಗಿ ಮಣ್ಣನ್ನು ತೆಗೆದು ಸಾಗಿಸುತ್ತಿದ್ದಾರೆ. ಸ್ಥಳೀಯ ಪ್ರಭಾವಿ ರಾಜಕೀಯ ಮುಖಂಡರ ಬೆಂಬಲ ಹಾಗೂ ಕುಮ್ಮಕ್ಕಿನಿಂದಲೇ ಅಕ್ರಮ ಮರಳು ಫಿಲ್ಟರ್ ದಂಧೆ ನಡೆಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT