ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಮದ್ಯ ವಶ

Last Updated 15 ಏಪ್ರಿಲ್ 2013, 8:49 IST
ಅಕ್ಷರ ಗಾತ್ರ

ಬಾಣಾವರ: ಪಟ್ಟಣದ ಪೊಲೀಸರು ಈಚೆಗೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 22,713 ರೂಪಾಯಿ ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

ಸಮೀಪದ ಕೊಂಡಬಾಗಿಲು ಗ್ರಾಮದಲ್ಲಿ ಷಡಾಕ್ಷರಿ ಎಂಬುವವರು ತಮ್ಮ ಮನೆ ಬಳಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಸುಳಿವು ಪಡೆದ ಪಿಎಸ್‌ಐ ಲೋಕೇಶ್ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಹೋದಾಗ 1,440 ರೂಪಾಯಿ ಮೌಲ್ಯದ ವಿವಿಧ ಬ್ರಾಂಡ್‌ನ ಮದ್ಯದ ಬಾಟಲಿ, ಸ್ಯಾಚೆಟ್‌ಗಳು ಪತ್ತೆಯಾದವು. ಆರೋಪಿ ಪರಾರಿಯಾಗಿದ್ದು, ಮದ್ಯ ವಶಪಡಿಸಿಕೊಂಡು ಪ್ರಕರಣವನ್ನು ಬಾಣಾವರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ಸಮೀಪದ ಪುರ್ಲೆಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 21,273ರೂ. ಮೌಲ್ಯದ ಅಕ್ರಮ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.

ಗ್ರಾಮದ ಯೋಗೀಶನಾಯ್ಕ ಎಂಬಾತ ತಮ್ಮ ಅಂಗಡಿ ಸಮೀಪ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಪಿಎಸ್‌ಐ ಲೋಕೇಶ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಹೋದಾಗ ಆರೋಪಿ ಪರಾರಿಯಾಗಿದ್ದು, ಮಾರಾಟ ಮಾಡಲು ದಾಸ್ತಾನು ಮಾಡಿದ್ದ ವಿವಿಧ ಬ್ರಾಂಡ್‌ನ ಮದ್ಯದ ಬಾಟಲಿಗಳು, ಸಾಚೆಟ್‌ಗಳನ್ನು ವಶಪಡಿಸಿಕೊಂಡು ಪ್ರಕರಣವನ್ನು ಬಾಣಾವರ ಠಾಣೆಯಲ್ಲಿ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT