ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ಷರ ದಾಸೋಹ ನೌಕರರ ಪ್ರತಿಭಟನೆ

Last Updated 15 ಏಪ್ರಿಲ್ 2013, 20:15 IST
ಅಕ್ಷರ ಗಾತ್ರ

ಬೆಂಗಳೂರು:  ಕನಿಷ್ಠ ವೇತನ ನಿಗದಿ ಮತ್ತಿತರ ಬೇಡಿಕೆಗಳಿಗೆ ಒತ್ತಾಯಿಸಿ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಸದಸ್ಯರು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಅಕ್ಷರ ದಾಸೋಹ ನೌಕರರಿಗೆ ತಿಂಗಳಿಗೆ ಕನಿಷ್ಠ ರೂ 10 ಸಾವಿರ ವೇತನ ನಿಗದಿಗೊಳಿಸಬೇಕು. ದಸರಾ ಹಾಗೂ ಬೇಸಿಗೆ ರಜೆಯ ದಿನಗಳಿಗೆ ರಜೆ ಭತ್ಯೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ಸಂಘದ ಪ್ರಧಾನ ಕಾರ್ಯದರ್ಶಿ ಮಾಲಿನಿ ಮೇಸ್ತ, `ಹತ್ತು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಸರಿಯಾದ ಸೌಲಭ್ಯ ಸಿಗುತ್ತಿಲ್ಲ.

ವೇತನ, ರಜೆ, ಭತ್ಯೆ ಹಾಗೂ ಇನ್ನಿತರ ಸೌಲಭ್ಯಗಳ ವಿಚಾರದಲ್ಲಿ ಅಕ್ಷರ ದಾಸೋಹ ನೌಕರರಿಗೆ ನ್ಯಾಯವಾಗುತ್ತಿದೆ' ಎಂದು ದೂರಿದರು. `ಅಕ್ಷರ ದಾಸೋಹ ನೌಕರರಿಗೆ ಕನಿಷ್ಠ ವೇತನ ನಿಗದಿಯಾಗಬೇಕು. ಜೀವವಿಮೆ ಸೌಲಭ್ಯ ನೀಡಬೇಕು.

ಸರ್ಕಾರಿ ನೌಕರರಿಗೆ ಸಿಗುವ ಎಲ್ಲ ಸೌಲಭ್ಯಗಳೂ ಅಕ್ಷರ ದಾಸೋಹ ನೌಕರರಿಗೂ ಸಿಗಬೇಕು' ಎಂದು ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT